ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021
ಶಾಸಕ ಸಂಗಮೇಶ್ವರ್ ವಿರುದ್ಧ ಪೊಲೀಸ್ ದೌರ್ಜನ್ಯದ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ‘ಶಿವಮೊಗ್ಗ ಚಲೋ’ ಹಮ್ಮಿಕೊಳ್ಳಲಾಗಿದೆ. ಸುಮಾರು 25 ಸಾವಿರ ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿಷ ಧ್ರುವನಾರಾಯಣ್, ಮಾರ್ಚ್ 13ರಂದು ಶಿವಮೊಗ್ಗ ಬಸ್ ನಿಲ್ದಾಣದಿಂದ ಸೈನ್ಸ್ ಮೈದಾನದವರೆಗೆ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಸೈನ್ಸ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುತ್ತದೆ ಎಂದರು.
ಸಿದ್ದರಾಮಯ್ಯ, ಡಿಕೆಶಿ, ಖರ್ಗೆ
ಪ್ರತಿಭಟನಾ ಮೆರವಣಿಗೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಕ್ಷುಲಕ ಕಾರಣಕ್ಕೆ ಕೇಸ್
ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ವಿರುದ್ಧ ಕ್ಷುಲಕ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ. ಈಗಾಗಲೆ ಶಾಸಕರ ಮಗನನ್ನು ಬಂಧಿಸಲಾಗಿದೆ. ಶರ್ಟ್ ತೆಗೆದರು ಎಂಬ ಕಾರಣಕ್ಕೆ ಸದನದಿಂದ ಸಸ್ಪೆಂಡ್ ಮಾಡಲಾಗಿದೆ. ಇದು ಏಕಪಕ್ಷೀಯ ನಿರ್ಧಾರವಾಗಿದೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್, ಮಾಜಿ ಶಾಸಕ ಪ್ರಸನ್ನ ಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕ ಯೋಗೇಶ್, ವಿಶ್ವನಾಥ ಕಾಶಿ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






