ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 11 MARCH 2021
ಜನರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ಶಿಕಾರಿಪುರ ತಾಲೂಕು ಮದಗಹಾರನಹಳ್ಳಿ ಗ್ರಾಮದ ಸುತ್ತಲು ಚಿರತೆ ಕಾಣಿಸಿಕೊಂಡಿತ್ತು. ಕಳೆದೊಂದು ತಿಂಗಳಿಂದ ಚಿರತೆಯಿಂದ ಆತಂಕ ಹೆಚ್ಚಾಗಿತ್ತು. ಬೆಳಗಿನ ಜಾವ ಅಥವಾ ಸಂಜೆ ವೇಳೆ ಜಮೀನಿಗೆ ತೆರಳುವುದುಕ್ಕೂ ಭಯ ಪಡುತ್ತಿದ್ದರು.
ಬೋನಿಗೆ ಬಿತ್ತು ಚಿರತೆ
ಚಿರತೆಯನ್ನು ಸೆರೆ ಹಿಡಿಯಲು ಎರಡು ದಿನದ ಹಿಂದೆ, ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇರಿಸಿದ್ದರು. ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಚಿರತೆಗೆ ಮೂರು ವರ್ಷವಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪಶು ವೈದ್ಯಾಧಿಕಾರಿ ಅವರು ಚಿರತೆಯ ಆರೋಗ್ಯ ತಪಾಸಣೆ ನಡೆಸಿದರು. ಬಳಿಕ ಅದನ್ನು ಅರಣ್ಯಕ್ಕೆ ಬಿಡಲಾಯಿತು.
ಎಸಿಎಫ್ ಗೋಪ್ಯಾನಾಯ್ಕ ನೇತೃತ್ವದಲ್ಲಿ ಕಾರ್ಯಚಾರಣೆ ನಡೆಸಲಾಯಿತು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

- ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್

- ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

- ₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















