ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಘಟಕದ ಐಎನ್‍ಟಿಯುಸಿ ಘಟಕದ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.
ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ, ಐಎನ್‍ಟಿಯುಸಿ ಸಂಘಟನೆ ವತಿಯಿಂದ ಬೈಕ್‍ನ ಶವಯಾತ್ರೆ ನಡೆಸಿದರು. ಕಾಂಗ್ರೆಸ್ ಕಚೇರಿ ಬಳಿ ಬೈಕ್ ಅಣಕು ಶವಯಾತ್ರೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಈ ಸಂದರ್ಭ ಘೋಷಣೆ ಕೂಗಲಾಯಿತು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆಯು ಏರಿಕೆಯಾಗುತ್ತಿದೆ ಎಂದು ಆರೋಪಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಕೆ.ದೇವೇಂದ್ರಪ್ಪ, ಐಎನ್‍ಟಿಯುಸಿ ಜಿಲ್ಲಾಧ‍್ಯಕ್ಷ ಕವಿತಾ ರಾಘವೇಂದ್ರ, ಐಎನ್‍ಟಿಯುಸಿ ಕಾರ್ಯಾಧ್ಯಕ್ಷ ಅರ್ಜುನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






