ಶಿವಮೊಗ್ಗ KSRTC ಬಸ್ ನಿಲ್ದಾಣದ ಮುಂದೆ ಫೋಟೊಗ್ರಾಫರ್ ಮೊಬೈಲ್ ಕದ್ದ ಖದೀಮರು

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021 (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಯುವಕರ ಗುಂಪೊಂದು ವ್ಯಕ್ತಿಯೊಬ್ಬರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೇಗಾಯ್ತು ಘಟನೆ?

ಫೋಟೊಗ್ರಾಫರ್ ಮಧುಸೂದನ್ ಅವರು ಮೈಸೂರಿಗೆ ಹೋಗಲು ಬೆಳಗಿನ ಜಾವ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದರು. ಸ್ನೇಹಿತರೊಬ್ಬರು ಬೈಕ್‍ನಲ್ಲಿ ಮಧುಸೂದನ್ ಅವರನ್ನು ಬಸ್ ನಿಲ್ದಾಣದ ಮುಂದೆ ಇರುವ ಲೋಕಾಯುಕ್ತ ಠಾಣೆ ಮುಂದೆ ಬಿಟ್ಟು ತೆರಳಿದರು.

ಸ್ನೇಹಿತ ತೆರಳುತ್ತಿದ್ದಂತೆ, ಎದುರಿನಿಂದ ಬಂದ ನಾಲ್ವರು ಯುವಕರು ಮಧುಸೂದನ್ ಅವರ ಜೇಬಿನಲ್ಲಿದ್ದ 11 ಸಾವಿರ ರೂ. ಮೌಲ್ಯದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Doddapete police station in shimoga

Leave a Comment