ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MARCH 2021
ರಮೇಶ್ ಜಾರಕಿಹೊಳಿ ಜೊತೆಯಲ್ಲಿ ಸಿಡಿಯಲ್ಲಿ ಕಾಣಿಸಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿರುವ ಯುವತಿ ಬಿಡುಗಡೆ ಮಾಡಿರುವ ವಿಡಿಯೋವನ್ನು ನಾನು ನೋಡಿಲ್ಲ. ಆ ಬಗ್ಗೆ ಚರ್ಚೆ ನಡೆಸಿದ ಬಳಿಕ ಮಾತನಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಯುವತಿ ವಿಡಿಯೋ ಕುರಿತು ಪತ್ರಿಕೆಗಳಲ್ಲಿ ಓದಿದ್ದೇನೆ. ಪೊಲೀಸರು, ಮಹಿಳಾ ಆಯೋಗದವರು ತನಿಖೆ ನಡೆಸಬೇಕು ಎಂದರು.
ಸ್ವಯಂ ಪ್ರೇರಿತ ದೂರು ದಾಖಲಿಸಬೇಕಿತ್ತು
ಸಿಡಿ ವಿಚಾರವಾಗಿ ಬಿಜೆಪಿಯ ಹಲವರು ಮಾತನಾಡಿದ್ದಾರೆ. ಯತ್ನಾಳ್, ವಿಶ‍್ವನಾಥ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಅದೆಲ್ಲವನ್ನು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು, ತನಿಖೆ ನಡೆಸಬಹುದಿತ್ತು. ಆದರೆ ಈ ತನಿಕೆ ತನಿಖೆಯಾಗಿಲ್ಲ. ಒಂದು ವೇಳೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲು ಆಗುವುದಿಲ್ಲ ಎಂದರೆ, ನಾವೇ ದೂರು ಕೊಡಿಸುತ್ತೇವೆ. ಅದು ಯಾವ ಸಿಡಿ ನೋಡೋಣ. ಮಂತ್ರಿ ಕೂಡ ಅಧಿಕೃತವಾಗಿ ಸಿಡಿ ವಿಚಾರ ಹೇಳಿದ್ದಾರೆ. ಅದರ ತನಿಖೆ ಯಾಕಾಗುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಷಡ್ಯಂತ್ರಗಳು ನಡೆಯುತ್ತಿವೆ, ಮುಂದುವರೆಯಲಿ
ನಮ್ಮ ಮೇಲೆ ಹಿಂದಿನಿಂದ ಷಡ್ಯಂತ್ರಗಳು ನಡೆದುಕೊಂಡು ಬಂದಿದೆ. ಅದು ಮುಂದುವರೆಯುತ್ತಿದೆ. ಮುಂದುವರೆಲಿ. ಇನ್ನು, ರಮೇಶ್ ಜಾರಕಿಹೊಳಿ ಅವರು ಸಿಡಿಯಲ್ಲಿ ಇರುವುದು ನಾನಲ್ಲ ಎಂದು ಒಮ್ಮೆ ಹೇಳಿದರು. ನಂಗೆ ಗೊತ್ತೇ ಇಲ್ಲ ಎಂದಿದ್ದರು. ಈಗ ಅವರೆ ಎಲ್ಲವನ್ನು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















