ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 MARCH 2021
ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ತುಂಗಾ ಚಾನಲ್‍ಗೆ ವ್ಯಕ್ತಿಯೊಬ್ಬ ಬಿದ್ದಿದ್ದು, ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಣಾ ಕಾರ್ಯ ನಡೆಸಿದ್ದಾರೆ.
ಇದನ್ನೂ ಓದಿ | ಸೆಲ್ಫಿ ಗಂಡಾಂತರ, ತುಂಗಾ ಡ್ಯಾಂನಲ್ಲಿ ಕಾಲು ಜಾರಿ ನದಿಗೆ ಬಿದ್ದ ಯುವಕ, ಪತ್ತೆಯಾಯ್ತು ಮೃತದೇಹ
ಸಾಗರದ ಸಂತೋಷ್ (45) ಎಂಬುವವರು ತುಂಗಾ ಚಾನಲ್‍ಗೆ ಬಿದ್ದಿದ್ದರು. ಅವರು ಚಾನಲ್‍ಗೆ ಬೀಳಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ಲಭ್ಯವಾಗಿದ್ದು, ರಕ್ಷಣಾ ಕಾರ್ಯ ನಡೆಸಲಾಯಿತು.
ನಡುರಾತ್ರಿ ರಕ್ಷಣಾ ಕಾರ್ಯಾಚರಣೆ
ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ನಡು ರಾತ್ರಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸುಮಾರು 80 ಅಡಿಯಷ್ಟು ಕೆಳಗಿಳಿದ ಅಗ್ನಿಶಾಮಕ ಸಿಬ್ಬಂದಿ, ಸಂತೋಷ್‍ನ ರಕ್ಷಣೆ ಮಾಡಿದ್ದಾರೆ. ಚಾನಲ್‍ಗೆ ಬಿದ್ದು ಸಂತೋಷ್ ತಲೆ ಮತ್ತು ಕಾಲಿಗೆ ಗಂಭೀರ ಗಾಯವಾಗಿದೆ.
ಇದನ್ನೂ ಓದಿ | ಜೋಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರು ಯುವಕ, ರಕ್ಷಣೆ ಬಳಿಕ ‘ರಾಣಿ ಫಾಲ್ಸ್ ಮೇಲೆ ಜ್ಞಾನೋದಯವಾಯ್ತು’ ಅಂದ
ಕೂಡಲೆಸಂತೋಷ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ತನಿಖೆ ನಡೆಯುತ್ತಿದೆ.



ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್

- ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

- ₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















