ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021
ಧರ್ಮಗ್ರಂಥ ಕುರಾನ್ ಮೂಲ ಆಶಯಕ್ಕೆ ಧಕ್ಕೆ ಉಂಟು ಮಾಡಿದ ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಸೈಯದ್ ವಾಸಿಮ್ ರಿಜ್ವಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಮಹಿಳಾ ವಿಭಾಗದ ವತಿಯಿಂದ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೈಯದ್ ವಾಸಿಮ್ ರಿಜ್ವಿ ಅವರು ಪವಿತ್ರ ಕುರಾನ್ನ 26 ವಚನಗಳನ್ನು ತೆಗೆದು ಹಾಕುವಂತೆ ಕೋರಿ ಸುಪ್ರಿಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಪವಿತ್ರ ಕುರಾನ್ ಗ್ರಂಥವನ್ನು ಅವಮಾನಿಸುವ ಮೂಲಕ ಕೆಲವು ಪ್ರಕರಣಗಳಲ್ಲಿ ಕೇಂದ್ರ ಸರ್ಕಾರದಿಂದ ನಡೆಯುತ್ತಿರುವ ತನಿಖೆಯಿಂದ ಪಾರಾಗಲು ಪ್ರಯತ್ನಿಸಿದ್ದಾರೆ ಎಂದರು.
ದೇಶದ ಮುಸ್ಲಿಂ ಸಮುದಾಯದ ಭಾವನೆಗಳನ್ನು ಉದ್ದೇಶ ಪೂರ್ವಕವಾಗಿ ನೋಯಿಸಲು, ಕೋಮು ಗಲಭೆ ಸೃಷ್ಟಿಸಲು, ರಾಷ್ಟ್ರೀಯ ಟಿವಿ ವಾಹಿನಿಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಯುವ ಮುಸ್ಲಿಮರ ದಾರಿ ತಪ್ಪಿಸಲು ಬಳಸಲಾಗುತ್ತಿದೆ. ಅವರನ್ನು ಉಗ್ರಗಾಮಿಗಳಾಗಲು ಭಯೋತ್ಪಾದಕರಾಗಲು ಪ್ರಚೋದಿಸಲಾಗುತ್ತಿದೆ ಎಂದು ದೂರಿದರು. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಬೀನಾ ಭಾನು, ಮಮತಾಜ್, ಎಹಸಾಸ್ ಎ ನಾಯಬ್, ಹಸೀನಾ, ವಾಹಿದಾ, ಯಾಸ್ಮಿನ್ ಮೊದಲಾದವರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]