ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ಚರ್ಚೆ, ಆರೋಗ್ಯ ಸಚಿವರಿಂದ ಸ್ಪಷ್ಟನೆ

ಶಿವಮೊಗ್ಗ ಲೈವ್.ಕಾಂ | NATIONAL NEWS | 22 ಮಾರ್ಚ್ 2021 (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಸೆಮಿ ಲಾಕ್‍ ಡೌನ್ ಕುರಿತು ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ ಎಂದು ಆರೋಗ್ಯ  ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಸುಧಾಕರ್, ಪ್ರತಿನಿತ್ಯ ಪರಿಸ್ಥಿತಿ ಗಮನಿಸುತ್ತಿದ್ದೇವೆ. ಏನಾದರೂ ಭಿನ್ನವಾಗಿ ಹೊರ ಹೊಮ್ಮಿದರೆ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಪ್ರಸ್ತುತ ಲಾಕ್‍ ಡೌನ್ ಅಥವಾ ಸೆಮಿ ಲಾಕ್‍ ಡೌನ್ ಕುರಿತು ಯಾವುದೆ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇನ್ನು, ಲಸಿಕೆ ವೇಸ್ಟ್ ಆಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಡಾ.ಸುಧಾಕರ್, ದೇಶಾದ್ಯಂತ ಕರ್ನಾಟಕದಲ್ಲಿ ಅತಿ ಕಡಿಮೆ ವೇಸ್ಟೇಜ್ ದಾಖಲಾಗಿದೆ. ಆದರೆ ಸ್ವಲ್ಪ ಪ್ರಮಾಣದಲ್ಲಿಯೂ ಲಸಿಕೆ ವೇಸ್ಟ್ ಆಗಬಾರದು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment