ಶಿವಮೊಗ್ಗ ಲೈವ್.ಕಾಂ | SHIMOGA NEWS | 23 MARCH 2021
ಶಹೀದ್ ದಿವಸ್ ಅಂಗವಾಗಿ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಪ್ಪನಾಯಕನ ಪ್ರತಿಮೆ ಮುಂಭಾಗದಿಂದ ಎಎ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್ವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್, ರಾಜಗುರು ಪರವಾಗಿ ಘೋಷಣೆ ಕೂಗಿದರು.
ಗೋಪಿ ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ, ಕ್ರಾಂತಿಕಾರಿ ಹೋರಾಟಗಾರರನ್ನು ಸ್ಮರಿಸಲಾಯಿತು. ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಪ್ರಮುಖರಾದ ಚನ್ನಬಸಪ್ಪ, ಸಂತೋಷ್ ಬಳ್ಳೆಕೆರೆ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]