ಶಿವಮೊಗ್ಗ ಲೈವ್.ಕಾಂ | SAGARA NEWS | 26 MARCH 2021
ಔಷಧ ಇಲ್ಲ ಎಂದು ಹೇಳಿದ್ದಕ್ಕೆ ಮೆಡಿಕಲ್ ಶಾಪ್ ಮಾಲೀಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಸ್ಥಳೀಯರೆ ಅತನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ತಾಲೂಕು ಕಾರ್ಗಲ್ ಮುಖ್ಯ ಪಟ್ಟಣ ಬೀದಿಯಲ್ಲಿನ ಲಕ್ಷ್ಮೀ ಮೆಡಿಕಲ್ ಶಾಪ್ ಮಾಲೀಕ ರಾಹುಲ್ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ಮಾಡಿದ ತೇಜಸ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮೆಡಿಕಲ್ ಶಾಪ್‌ಗೆ ಬಂದ ತೇಜಸ್ ಕೆಲವು ಔಷಧಗಳನ್ನು ಖರೀದಿಸಲು ಕೇಳಿದ್ದಾನೆ. ಈ ಔಷಧಗಳು ಇಲ್ಲ ಎಂದು ರಾಹುಲ್ ತಿಳಿಸಿದ್ದಾರೆ. ಇದರಿಂದ ಕುಪಿತನಾದ ತೇಜಸ್, ರಾಹುಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಂಗಡಿಯಲ್ಲಿದ್ದ ಔಷಧಗಳು ಚಲ್ಲಾಪಿಲ್ಲಿ ಮಾಡಲಾಗಿದೆ. ಗಾಜು ಒಡೆಯಲಾಗಿದ್ದು, ಸ್ಥಳೀಯರು ಜಗಳ ಬಿಡಿಸಿದ್ದಾರೆ ಎಂದು ತಿಳಿದು ಬಂದಿದೆ. ತೇಜಸ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]