ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ವಿರೋಧ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನೆಹರೂ ಕ್ರೀಡಾಂಗಣದ ಆವರಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಕಾರ್ಯಕ್ರಮಕ್ಕೆ ಅನುಮತಿ ನೀಡುವ ಮೂಲಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಎನ್‍ಎಸ್‍ಯುಐ ವಿದ್ಯಾರ್ಥಿ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ನೆಹರೂ ಕ್ರೀಡಾಂಗಣದ ಮುಂದೆ ಪ್ರತಿಭಟನೆ ನಡೆಸಿದ ಎನ್‍ಎಸ್‍ಯುಐ ಕಾರ್ಯಕರ್ತರು, ಮಾರ್ಚ್ 27ರಂದು ನರೇಂದ್ರ ಮೋದಿ ವಿಚಾರ ಮಂಚ್‍ನಿಂದ ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರು ರಾಜಕೀಯ ಪ್ರೇರಿತ ಕಾರ್ಯಕ್ರಮವಾಗಿದ್ದು, ಇಲ್ಲಿ ಅನುಮತಿ ನೀಡಿದ್ದು ಸರಿಯಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಗಷ್ಟೇ ಅವಕಾಶ

ನೆಹರೂ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಕ್ಕೆ ಮಾತ್ರ ಅವಕಾಶ ಎಂದು ಇಲಾಖೆ ತಿಳಿಸಿತ್ತು. ಇದೆ ಕಾರಣಕ್ಕೆ ಇಲ್ಲಿ ರೈತ ಮಹಾ ಪಂಚಾಯತ್ ನಡೆಸಲು ಅವಕಾಶ ನೀಡಲಿಲ್ಲ.  ಈಗ ಚಕ್ರವರ್ತಿ ಸೂಲಿಬೆಲೆ ಭಾಗವಹಿಸುತ್ತಿರುವ ರಾಜಕೀಯ ಪ್ರೇರಿತ ಕಾರ್ಯಕ್ರಮಕ್ಕೆ ಅವಕಾಶ ನೀಡಿದ್ದು ಏಕೆ ಎಂದು ಪ್ರಶ್ನಿಸಿದರು.

ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಭಾಷಣದಲ್ಲಿ ಬರಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದರೆ, ಯುವಕರಿಗೆ ಉದ್ಯೋಗ, ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸಲಿದ್ದಾರೆ ಎಂದಿದ್ದರು. ಈಗ ಯುವಕರಿಗೆ ಉದ್ಯೋಗವಿಲ್ಲ. ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಸುಳ್ಳು ಭಾಷಣ ಮಾಡುವವರ ಕಾರ್ಯಕ್ರಮಕ್ಕೆ ಅನುಮತಿ ನಿಡಬಾರದು ಆಗ್ರಹಿಸಿದರು.

ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ಬಾಲಾಜಿ, ಕಾರ್ಯಾಧ್ಯಕ್ಷ ರವಿಕುಮಾರ್, ನಗರಾಧ್ಯಕ್ಷ ವಿಜಯ್, ರವಿಕುಮಾರ್, ಆಲ್ವಿನ್, ಮನೋಜ್, ಪುರಲೆ ಮಂಜು, ಗಣೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment