ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 27 MARCH 2021
ದೇವಸ್ಥಾನವೊಂದರ ಗರ್ಭಗುಡಿಯ ಮುಂದೆ ಇದ್ದ ಹಿತ್ತಾಳೆ ಘಂಟೆಗಳ ಕಳ್ಳತನವಾಗಿದೆ. ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆ ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಶಂಕೆ ಇದ್ದು, ಪ್ರಕರಣ ದಾಖಲಾಗಿದೆ.
ಸಾಗರ ತಾಲೂಕು ಹೊಸಗುಂದ ಗ್ರಾಮದ ಕಂಚಿಕಾಳಮ್ಮ ದೇವಸ್ಥಾನದಲ್ಲಿ ಘಂಟೆಗಳು ಕಳುವಾಗಿದೆ. ಇವುಗಳ ಮೌಲ್ಯ ಸುಮಾರು 12 ಸಾವಿರ ಎಂದು ಅಂದಾಜಿಸಲಾಗಿದೆ.
ಮಾರ್ಚ್ 24ರಂದು ಸಂಜೆ ಬೈಕ್‌ನಲ್ಲಿ ಬಂದಿದ್ದ ಮೂವರು ಘಂಟೆಗಳನ್ನು ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಘಂಟೆಗಳನ್ನು ಬಿಚ್ಚಿ, ಗೋಣಿ ಚೀಲದಲ್ಲಿ ತುಂಬಿಕೊಂಡು ಹೋಗಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422