ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 27 MARCH 2021
ಅಧಿಕಾರ ಸಿಗದೆ, ಸವಕಲು ನಾಣ್ಯಗಳಾಗಿರುವ ಕೆಲವು ಪಕ್ಷಗಳು ದೇಶದ ರೈತರ ದಾರಿ ತಪ್ಪಿಸುತ್ತಿವೆ. ಕೇಂದ್ರ ಸರ್ಕಾರವನ್ನು ವಿರೋಧಿಸುವುದೆ ಈ ಪಕ್ಷಗಳ ಕೆಲಸವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ತೀರ್ಥಹಳ್ಳಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ 8.5 ಕೋಟಿ ವೆಚ್ಚದಲ್ಲಿ 19 ಗೋದಾಮುಗಳ ಉದ್ಘಾಟನೆ ಹಾಗೂ ವಿವಿಧ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಈಶ್ವರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಎಪಿಎಂಸಿಗಳನ್ನು ಬಲಪಡಿಸಲು ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ಕೂಡ ಇದಕ್ಕೆ ಪೂರಕವಾಗಿದ್ದು, ರೈತರಿಗೆ ಅನುಕೂಲವಾಗಲಿದೆ ಎಂದು ಈಶ್ವರಪ್ಪ ಹೇಳಿದರು.
ಈ ವೇಳೆ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಎಪಿಎಂಸಿ ಕಾಯ್ದೆ ರೈತ ಪರವಾಗಿದೆ. ಆದರೆ ಎಡರಂಗದವರು ರೈತರನ್ನು ಪ್ರಚೋದಿಸುತ್ತಿದ್ದಾರೆ. ಕೃಷಿ ಕಾಯ್ದೆ ವಿಚಾರದಲ್ಲಿ ರೈತರಲ್ಲಿ ಗೊಂದಲ ಉಂಟು ಮಾಡುತ್ತಿರುವ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇನ್ನು ಕೇಂದ್ರ ಸರ್ಕಾರ ಅಡಕೆ ಬೆಳೆಗಾರರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಅಪೂರ್ವ ಶರಧಿ, ಭಾರತಿ ಪ್ರಭಾಕರ್, ಕಲ್ಪನಾ ಪದ್ಮನಾಭ, ಎಪಿಎಂಸಿ ಸದಸ್ಯರು ಸೇರಿದಂತೆ ಹಲವರು ಇದ್ದರು.
ವಿವಿಧ ಕಾಮಗಾರಿಗೆ ಚಾಲನೆ
ತೀರ್ಥಹಳ್ಳಿ 40 ಲಕ್ಷ ರೂ. ವೆಚ್ಚದ ಸ್ತ್ರೀಶಕ್ತಿ ಭವನವನ್ನು ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.
ತೀರ್ಥಹಳ್ಳಿಯಲ್ಲಿ ಒಂದು ಕೋಟಿ ವೆಚ್ಚದಲ್ಲಿ ಆರ್ಯ ಈಡಿಗರ ಭವನ ಕಟ್ಟಡದ ಮುಂದುವರಿದ ಕಾಮಗಾರಿಗೆ ಸಚಿವ ಈಶ್ವರಪ್ಪ ಚಾಲನೆ.
ತೀರ್ಥಹಳ್ಳಿಯಲ್ಲಿ ಹನ್ನೆರಡು ಕೋಟಿ ವೆಚ್ಚದಲ್ಲಿ ನೂತನ ತಾಲ್ಲೂಕು ಪಂಚಾಯತ ಕಟ್ಟಡ ಕಾಮಗಾರಿಕೆ ಸಚಿವ ಈಶ್ವರಪ್ಪ ಶಂಕುಸ್ಥಾಪನೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200