ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MARCH 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಿಶೇಷ ಉಪನ್ಯಾಸ ನೀಡಲು ಶಿವಮೊಗ್ಗಕ್ಕೆ ಆಗಮಿಸಿದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಎನ್‌ಎಸ್‌ಯುಐ ಕಾರ್ಯಕರ್ತರು ಗೋ ಬ್ಯಾಕ್ ಚಳವಳಿ ನಡೆಸಿದರು.
ನೆಹರೂ ಸ್ಟೇಡಿಯಂನಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಹಿನ್ನೆಲೆಯಲ್ಲಿ ನೆಹರೂ ಸ್ಟೇಡಿಯಂ ಬಳಿ ಎನ್‌ಎಸ್‌ಯುಐ ಕಾರ್ಯಕರ್ತರು ‘ಗೋ ಬ್ಯಾಕ್ ಸೂಲಿಬೆಲೆ’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದರು.
ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮತ್ತೊಂದೆಡೆ ಚಕ್ರವರ್ತಿ ಸೂಲಿಬೆಲೆ ಅವರು ಹಲವು ಸುಳ್ಳುಗಳನ್ನು ಹೇಳಿ, ಯುವ ಸಮೂಹ ಮತ್ತು ಜನರ ದಿಕ್ಕು ತಪ್ಪಿಸಿದ್ದಾರೆ. ಆದ್ದರಿಂದ ಅವರ ಭಾಷಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
ನೆಹರೂ ಸ್ಟೇಡಿಯಂಗೆ ಮುತ್ತಿಗೆ ಹಾಕಲು ಯತ್ನಿಸಿದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ತಡೆದರು.
ಎಸ್‌ಎಸ್‌ಯುಐ ಮುಖಂಡರಾ ಚೇತನ್ ಗೌಡ, ಬಾಲಾಜಿ ಸೇರಿದಂತೆ ಹಲವರು ಈ ವೇಳೆ ಇದ್ದರು.


LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






