ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 MARCH 2021
ಚಕ್ರಾ ಡ್ಯಾಂ ಹಿನ್ನೀರಿನಲ್ಲಿ ಈಜುತ್ತಿದ್ದ ಇಬ್ಬರು ಪ್ರವಾಸಿಗರು ನೀರಿನಲ್ಲಿ ಮುಳುಗಿದ್ದಾರೆ. ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಶೋಧ ಕಾರ್ಯ ನಡೆಯುತ್ತಿದೆ.
ವಿಶ್ವೇಶ್ವರ (58) ಮೃತರು. ಹರಿ (58) ಎಂಬುವವರಿಗೆ ಶೋಧ ಕಾರ್ಯ ನಡೆಯುತ್ತಿದೆ. ಶನಿವಾರ ಹಿನ್ನೀರಿನಲ್ಲಿ ಈಜುತ್ತಿದ್ದಾಗ ಘಟನೆ ಸಂಭವಿಸಿದೆ.
ದೇವಸ್ಥಾನಕ್ಕೆ ಹೋಗಿದ್ದರು
ಬೆಂಗಳೂರಿನ ಬಸವನಗುಡಿಯಿಂದ ನಾಲ್ವರು ಮಹಿಳೆಯರು ಸೇರಿ 16 ಮಂದಿ ಪ್ರವಾಸಕ್ಕೆ ಬಂದಿದ್ದರು. ಚಕ್ರಾನಗರ ಅರಣ್ಯ ಪ್ರದೇಶದಲ್ಲಿರುವ ಮತ್ತೂರು ಶ್ರೀ ವನದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ, ಹಿನ್ನೀರು ತೀರಕ್ಕೆ ಬಂದಿದ್ದರು. ಹಿನ್ನೀರು ಭಾಗದಲ್ಲಿ ಈಜುವಾಗ ಇಬ್ಬರು ಕಣ್ಮರೆಯಾಗಿದ್ದರು.
ರಕ್ಷಣೆ ಮಾಡಿ, ಆಸ್ಪತ್ರೆಗೆ
ಮುಳುಗುತ್ತಿದ್ದ ವಿಶ್ವೇಶ್ವರ ಅವರನ್ನು ರಕ್ಷಿಸಿ, ಮಾಸ್ತಿಕಟ್ಟೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಶ್ವೇಶ್ವರ ಅವರು ಮೃತಪಟ್ಟಿದ್ದಾರೆ. ಇನ್ನು, ಹರಿ ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ನಗರ ಠಾಣೆ ಪಿಎಸ್ಐ ಶಿವರಾಜ್, ಎಎಸ್ಐ ಗಣಪತಿ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200