ಡಿಕೆ ಶಿವಕುಮಾರ್ ಅವರು ಒಂದು ವಾರದೊಳಗೆ ಕ್ಷಮೆಯಾಚಿಸಬೇಕು, ಇಲ್ಲವಾದರೆ ಮಾನನಷ್ಟ ಕೇಸ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.ಕಾಂ | SHIMOGA NEWS | 28 MARCH 2021

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಒಂದು ವಾರದಲ್ಲಿ ಕ್ಷಮೆ ಕೋರಬೇಕು. ಇಲ್ಲವಾದರೆ ಮಾನನಷ್ಟ ಮೊಕದಮೆ ಹೂಡುವುದಾಗಿ ಸಾಗರದ ವಕೀಲ ಪ್ರವೀಣ್‌ ಕುಮಾರ್‌ ಅವರು ತಮ್ಮ ವಕೀಲರ ಮೂಲಕ ನೊಟೀಸ್‌ ಜಾರಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು, ʼಸೋನಿಯಾ ಗಾಂಧಿ ಅವರ ವಿರುದ್ಧ ತಡಕಲಾಂಡಿಯೊಬ್ಬ ದೂರು ನೀಡಿದರೆ ಪೊಲೀಸರು ಎಫ್‌ಐಆರ್‌ ದಾಖಲಿಸುತ್ತಾರೆ. ಇದನ್ನು ನಾವು ಸುಮ್ಮನೆ ಬಿಡುವುದಿಲ್ಲʼ ಎಂದು ಹೇಳಿದ್ದರು.

ಇದನ್ನೂ ಓದಿ  | ಸೋನಿಯಾ ಗಾಂಧಿ ವಿರುದ್ಧದ ಕೇಸ್, ಸಾಗರ ಪೊಲೀಸರಿಗೆ ಹೈಕೋರ್ಟ್ ಚಾಟಿ, ಏನಿದು ಪ್ರಕರಣ?

ತಡಕಲಾಂಡಿ ಪದ ಬಳಕೆ ಮಾಡಿರುವ ಡಿ.ಕೆ.ಶಿವಕುಮಾರ್‌ ಅವರು ಒಂದು ವಾರದ ಒಳಗೆ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಮಾನನಷ್ಟ ಮೊಕದಮೆ ದಾಖಲಿಸಲಾಗುತ್ತದೆ ಎಂದು ಮಾರ್ಚ್‌ 26ರಂದು ನೊಟೀಸ್‌ ಜಾರಿಗೊಳಿಸಿದಾರೆ. ಪ್ರವೀಣ್‌ ಕುಮಾರ್‌ ಅವರು ತಮ್ಮ ವಕೀಲ ಯೋಗೇಂದ್ರ ಮತ್ತು ನರೇಂದ್ರ ಅವರ ಮೂಲಕ ನೊಟೀಸ್‌ ಜಾರಿ ಮಾಡಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment