ಭದ್ರಾವತಿ ನಗರಸಭೆ, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ ದಿನಾಂಕ ಫಿಕ್ಸ್

NAMMUR NEWS NEW PROMO 1 1 (ಈ ಸುದ್ದಿಯನ್ನು ಇನ್ನು 44 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021

ಶಿವಮೊಗ್ಗ ಜಿಲ್ಲೆಯ ಎರಡು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಘೋಷಣೆಯಾದ ದಿನಾಂಕದಂದು ಚುನಾವಣೆ ನಡೆಸುವಂತೆ ಚುನಾವಣಾ ಆಯೋಗ ಜಿಲ್ಲಾಧಿಕಾರಿ ಅವರಿಗೆ ಆದೇಶಿಸಿದೆ.

THIRTHAHALLI MAP GRAPHICS 1 1

ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಚುನಾವಣಾ ದಿನಾಂಕ ನಿಗದಿಪಡಿಸಲಾಗಿದೆ. ಏಪ್ರಿಲ್ 27ರಂದು ಮತದಾನ ನಡೆಸುವಂತೆ ಚುನಾವಣಾ ಅಯೋಗ ಆದೇಶಿಸಿದೆ.

ಏಪ್ರಿಲ್ 8ರಂದು ಜಿಲ್ಲಾಧಿಕಾರಿಗಳು ಚುನಾವಣೆಗೆ ಅಧಿಸೂಚನೆ ಹೊರಡಿಸಬೇಕು.

ಏಪ್ರಿಲ್ 15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 16ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 19ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 27ರಂದು ಮತದಾನ ನಡೆಯಲಿದೆ. ಮರು ಮತದಾನ ಅವಶ್ಯಕತೆ ಇದ್ದರೆ ಏಪ್ರಿಲ್ 29ರಂದು ನಡೆಸಬಹುದಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ

ಎಪ್ರಿಲ್ 30ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಸಬೇಕು. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಿಸಬೇಕು ಎಂದು ಚುನಾವಣಾ ಆಯೋಗ ಆದೇಶದಲ್ಲಿ ತಿಳಿಸಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

BHADRAVATHI-MAP-GRAPHICS

Leave a Comment