ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021
ವಸತಿ ಫಲಾನುಭವಿಗಳ ಆಯ್ಕೆಯ ಜವಾಬ್ದಾರಿಯನ್ನು ಶಾಸಕರಿಗೆ ನೀಡಿರು ಕ್ರಮಕ್ಕೆ ಹೊಸನಗರ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಹೊಸನಗರ ತಾಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ತಾಲೂಕು ಕಾಂಗ್ರೆಸ್ ಘಟಕ, ಗ್ರಾಮ ಸಭೆಗಳಲ್ಲಿ ವಸತಿ ಫಲಾನುಭವಿಗಳ ಆಯ್ಕೆ ನಡೆಯುತ್ತಿತ್ತು. ಈಗ ಆ ಹೊಣೆಯನ್ನು ಶಾಸಕರಿಗೆ ವಹಿಸಲಾಗಿದೆ. ಇದರಿಂದ ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ವಿಕೇಂದ್ರಿಕರಣ ನೀತಿಗೆ ವಿರುದ್ಧ
ಈ ವೇಳೆ ಮಾತನಾಡಿದ ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಈವರೆಗೂ ದೇಶದಲ್ಲೇ ನಮ್ಮ ರಾಜ್ಯದ ಪಂಚಾಯತ್ ರಾಜ್ ವ್ಯವಸ್ಥೆ ಮಾದರಿಯನಿಸಿಕೊಂಡಿತ್ತು. ಆದರೆ ಶಾಸಕರು, ಸಚಿವರು ಮೂಗು ತೂರಿಸಲು ಆರಂಭಿ
ಫಲಾನುಭವಿಗಳ ಆಯ್ಕೆಯ ಜವಾಬ್ದಾರಿಯನ್ನು ಶಾಸಕರಿಗೆ ವಹಿಸಿರುವುದು ಪಂಚಾಯತ್ ರಾಜ್ ಕಾಯ್ದೆಯ ವಿರುದ್ಧವಾಗಲಿದೆ ಎಂದು ಆರೋಪಿಸಿದರು.
ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ಸದಾಶಿವ ಶೆಟ್ಟಿ, ಸೂಚಕ ರಫೀಕ್, ತಾಲೂಕು ಪಂಚಾಯತ್ ಸದಸ್ಯರಾದ ಏರಿಗೆ ಉಮೇಶ್, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.


ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು







