ಶಿವಮೊಗ್ಗದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕರೋನ ಸೋಂಕಿತರ ಸಂಖ್ಯೆ, ಈಗ ಎಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯಲ್ಲಿ ಮಂಗಳವಾರ 22 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ.

ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನ 11, ಭದ್ರಾವತಿಯ 4, ಸಾಗರದ 3, ಹೊಸನಗರದ 1 ಮತ್ತು ಇತರೆ ಜಿಲ್ಲೆಯಿಂದ ಬಂದಿರುವ ಮೂವರು ಸೋಂಕಿತರಿದ್ದಾರೆ.

ಎರಡು ಸಾವಿರಕ್ಕೂ ಹೆಚ್ಚು ಸ್ಯಾಂಪಲ್

ಮಂಗಳವಾರ ಎರಡು ಸಾವಿರಕ್ಕೂ ಹೆಚ್ಚು ಸ್ಯಾಂಪಲ್ ಸಂಗ್ರಹಿಸಲಾಗಿದೆ. ಜಿಲ್ಲೆಯಾದ್ಯಂತ 536 ವಿದ್ಯಾರ್ಥಿಗಳು ಸೇರಿ 2606 ಮಂದಿಯ ಸ್ಯಾಂಪಲ್ ಸಂಗ್ರಹಿಸಿಲಾಗಿದೆ. 1882 ಸ್ಯಾಂಪಲ್‍ಗಳು ನೆಗಟಿವ್ ಬಂದಿದೆ.

ಚಿಕಿತ್ಸೆಯಲ್ಲಿರುವ ಸೋಂಕಿತರ ಸಂಖ್ಯೆ ಹೆಚ್ಚಳ

ಸೋಂಕಿತರ ಸಂಖ್ಯೆ ಹೆಚ್ಚಳವಾದಂತೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಸಂಖ್ಯೆಯು ಏರಿಕೆಯಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ 170 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 67 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 33 ಮಂದಿ, ಹೋಂ ಐಸೊಲೇಷನ್‍ನಲ್ಲಿ 70 ಮಂದಿ ಇದ್ದಾರೆ.  ಇನ್ನು ಮಾರ್ಚ್ 30ರಂದು 14 ಮಂದಿ ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment