ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 APRIL 2021
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್) ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಜೆ.ಜಗದೀರ್ ಪುನರಾಯ್ಕೆ ಆಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಜಗದೀಶ್ ಅತಿ ಹೆಚ್ಚು ಮತಗಳ ಗಳಿಸಿ, ಜಯಗಳಿಸಿದ್ದಾರೆ.
ಯಾರಿಗೆ ಎಷ್ಟೆಷ್ಟು ಮತ ಬಂದಿದೆ?
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆ.ಜಗದೀಶ 117 ಮತ ಗಳಿಸಿದ್ದಾರೆ. ಪ್ರತಿಸ್ಪರ್ದಿ ಶ್ರೀನಿವಾಸ್ 63, ಸುರೇಶ್ 38 ಮತಗಳನ್ನು ಗಳಿಸಿದ್ದರು.
ಉಪಾಧ್ಯಕ್ಷ ಸ್ಥಾನಕ್ಕೆ ಸಮ ಮತ
ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರಿಗೂ ಸಮ ಮತಗಳು ಲಭಿಸಿದೆ. ಎಎಲ್‌ಡಬ್ಲು ಕುಮಾರ್ ಮತ್ತು ಶೈಲಶ್ರೀ ಅವರು ತಲಾ 89 ಮತಗಳನ್ನು ಪಡೆದಿದ್ದಾರೆ. ಲಾಟರಿ ಮೂಲಕ ಅಧಿಕಾರವಧಿಯನ್ನು ಆಯ್ಕೆ ಮಾಡಲಾಗಿದೆ. ಮೊದಲ 18 ತಿಂಗಳು ಕುಮಾರ್ ಮತ್ತು ಎರಡನೇ ಅವಧಿಗೆ ಶೈಲಶ್ರೀ ಅವರು ಉಪಾಧ್ಯಕ್ಷರಾಗಿ ಅಧಿಕಾರ ನಡೆಸಲಿದ್ದಾರೆ.
ಇನ್ನು, ಪ್ರಧಾನ ಕಾರ್ಯದರ್ಶಿಯಾಗಿ ಯು.ಎ.ಬಸಂತಕುಮಾರ್, ಕಾರ್ಯದರ್ಶಿಯಾಗಿ ಕೆ.ಆರ್.ಮನು, ಖಚಾಂಚಿಯಾಗಿ ಎಸ್.ಮೋಹನ್ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಗೆ ಆರು ಮಂದಿಯನ್ನು ಆಯ್ಕೆ ಮಾಡಲಾಗಿದೆ. ಯೋಗೇಶ್, ಮನೋಹರನ್, ಕುಮಾರಸ್ವಾಮಿ, ಸುನಿಲ್, ಮಂಜುನಾಥ್, ಪಿ.ರಾಜು ಅವರು ಕಾರ್ಯಕರಿ ಸಮಿತಿಯಲ್ಲಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200