KSRTC ಮುಷ್ಕರ, ನಾಳೆ ಎಂದಿನಂತೆ ನಡೆಯುತ್ತೆ ಪರೀಕ್ಷೆ, ಮುಂದಿನ ಪರೀಕ್ಷೆಗಳ ಬಗ್ಗೆ ಕುವೆಂಪು ವಿವಿ ನಿರ್ಧಾರವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರವಿದ್ದರೂ ನಿಗದಿಯಾಗಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ವೇಳಾಪಟ್ಟಿ ಪ್ರಕಾರವೇ ನಡೆಯಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ. ಕಣ್ಣನ್ ತಿಳಿಸಿದ್ದಾರೆ.

ಏಪ್ರಿಲ್‌ 7ರಂದು ನಿಗದಿಯಾಗಿರುವ ಪರೀಕ್ಷೆಗಳು ವೇಳಾಪಟ್ಟಿಯ ಪ್ರಕಾರ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ  | KSRTC ನೌಕರರ ಮುಷ್ಕರ, ಶಿವಮೊಗ್ಗದಲ್ಲಿ ಹೇಗಿದೆ ಪರಿಸ್ಥಿತಿ?

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಅನಿರ್ದಿಷ್ಟಾವಧಿಯದಾಗಿದ್ದು, ಮುಷ್ಕರ ಮುಂದುವರೆಯುವವರೆಗೆ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಾಗುವುದಿಲ್ಲ. ಇನ್ನು‌ ಪರೀಕ್ಷೆಗಳನ್ನು ಮುಂದೂಡಬೇಕೆಂದು ಪದವಿ ಕಾಲೇಜುಗಳ ಯಾವುದೇ ಪ್ರಾಂಶುಪಾಲರಿಂದ ಮನವಿ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾಳಿನ‌ ಪರಿಸ್ಥಿತಿಯ‌ ಬಗ್ಗೆ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಿ, ಮುಂದಿನ ಪರೀಕ್ಷೆಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment