ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021
ಕೆಎಸ್ಆರ್ಟಿಸಿ ನೌಕರರ ಮುಷ್ಕರದ ಹಿನ್ನೆಲೆ ಶಿವಮೊಗ್ಗ ಬಸ್ ನಿಲ್ದಾಣ ಸಂಪೂರ್ಣ ಖಾಲಿ ಖಾಲಿಯಾಗಿದೆ. ಸಿಬ್ಬಂದಿಗಳು ಗೈರಾಗಿರುವುದರಿಂದ ಬಸ್ಸುಗಳು ನಿಲ್ದಾಣಕ್ಕೆ ಬಂದಿಲ್ಲ. ಇನ್ನು, ಪ್ರಯಾಣಿಕರು ಇಲ್ಲದೆ ಬಣಗುಡುತ್ತಿದೆ.
ಇದನ್ನೂ ಓದಿ | KSRTC ಬಸ್ ಮುಷ್ಕರ, ಶಿವಮೊಗ್ಗ ನಿಲ್ದಾಣದಲ್ಲಿ ರಾತ್ರಿ ಹೇಗಿದೆ ಪರಿಸ್ಥಿತಿ?
ಶಿವಮೊಗ್ಗ ಬಸ್ ನಿಲ್ದಾಣ ಖಾಲಿಯಾಗಿದೆ. ರಾತ್ರಿಯಿಂದಲೇ ಸಿಬ್ಬಂದಿಗಳ ಕೊರತೆ ಉಂಟಾಗಿತ್ತು. ಬೆಳಗ್ಗೆ ಹೊತ್ತಿಗೆ ನೌಕರರು ಕರ್ತವ್ಯಕ್ಕೆ ಗೈರಾಗಿದ್ದಾರೆ. ಆದ್ದರಿಂದ ಘಟಕದಲ್ಲಿರುವ ಬಸ್ಸುಗಳು ನಿಲ್ದಾಣಕ್ಕೆ ಬಂದಿಲ್ಲ. ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲವು ಜನರು, ಕೆಎಸ್ಆರ್ಟಿಸಿ ಸಿಬ್ಬಂದಿಗಳಿದ್ದಾರೆ.
ಸಾವಿರಕ್ಕೂ ಹೆಚ್ಚು ಬಸ್ ಸಂಚಾರ
ಶಿವಮೊಗ್ಗ ಬಸ್ ನಿಲ್ದಾಣದಿಂದ ಪ್ರತಿದಿನ ಸಾವಿರಕ್ಕೂ ಹೆಚ್ಚು ಬಸ್ಸುಗಳು ಸಂಚರಿಸುತ್ತವೆ. ಶಿವಮೊಗ್ಗ ಘಟಕ ಮತ್ತು ವಿವಿಧೆಡೆಯಿಂದ ಬರುವ ಬಸ್ಸುಗಳು ಸೇರಿ ಸುಮಾರು 1300 ಬಸ್ಸುಗಳು ನಿಲ್ದಾಣಕ್ಕೆ ಬಂದು ಹೋಗುತ್ತವೆ. ಆದರೆ ನೌಕರರ ಮುಷ್ಕರದಿಂದಾಗಿ ಬೆಳಗ್ಗೆಯಿಂದ ಒಂದೂ ಬಸ್ ನಿಲ್ದಾಣಕ್ಕೆ ಬಂದಿಲ್ಲ ಅನ್ನುತ್ತಾರೆ ಶಿವಮೊಗ್ಗ ನಿಲ್ದಾಣದ ನಿಯಂತ್ರಣಾಧಿಕಾರಿ ಸಿದ್ದೇಶ್.
ಎಲ್ಲೆಲ್ಲಿಗೆ ಎಷ್ಟು ಬಸ್ ಸಂಚರಿಸುತ್ತಿದ್ದವು?
ಶಿವಮೊಗ್ಗ ನಿಲ್ದಾಣದಿಂದ ಪ್ರತಿದಿನ ವಿವಿಧ ಜಿಲ್ಲೆಗಳು ಬಸ್ಸುಗಳು ಸಂಚರಿಸುತ್ತವೆ. ಬೆಂಗಳೂರಿಗೆ 141, ಮೈಸೂರಿಗೆ 63, ಹಾಸನ 26, ಗದಗ 11, ಚಿತ್ರದುರ್ಗ 23, ಉಡುಪಿ – ಮಂಗಳೂರು 17, ಚಿಕ್ಕಮಗಳೂರು – ಧರ್ಮಸ್ಥಳ 96, ರಾಯಚೂರು – ಹೈದರಾಬಾದ್ 93, ಬೆಳಗಾವಿ – ಪೂನಾ – ಮುಂಬೈ 45, ಹರಿಹರ – ದಾವಣಗೆರೆ 53, ಬನವಾಸಿ- ಆನವಟ್ಟಿ – ಶಿರಸಿ 17, ಕೊಲ್ಲೂರು – ಬೈಂದೂರು – ಭಟ್ಕಳ 8, ಶಿರಸಿ – ಕಾರವಾರ 43 ಸೇರಿದಂತೆ ವಿವಿಧೆಡೆ ಬಸ್ಸುಗಳು ಸಂಚರಿಸುತ್ತಿದ್ದವು. ಪ್ರತಿ ದಿನ ಅಂದಾಜು 30 ಸಾವಿರ ಪ್ರಯಾಣಿಕರು ನಿಲ್ದಾಣಕ್ಕೆ ಬಂದು ಹೋಗುತ್ತಿದ್ದರು.
ಇವತ್ತು ಹೇಗಿದೆ ಬಸ್ ನಿಲ್ದಾಣ? ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















