ಶಿವಮೊಗ್ಗ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇವತ್ತು ಖಾಸಗಿ ಬಸ್‌ಗಳದ್ದೇ ದರ್ಬಾರ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021

ಕೆಎಸ್‍ಆರ್‍ಟಿಸಿ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ಸಂಕಷ್ಟ ಆಗಬಾರದು ಎಂದು ರಾಜ್ಯ ಸರ್ಕಾರ ಖಾಸಗಿ ಬಸ್‍ಗಳಿಗೆ ಮುಕ್ತ ಪರ್ಮಿಟ್ ನೀಡಿದೆ. ಸರ್ಕಾರಿ ಮಾರ್ಗದಲ್ಲೂ ಖಾಸಗಿ ಬಸ್‍ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ದೂರದ ಊರುಗಳಿಗೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಲ್ಲಿ ಖಾಸಗಿ ಬಸ್‍ಗಳು ರಸ್ತೆಗಿಳಿದಿವೆ.

ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದಲೇ ಖಾಸಗಿ ಬಸ್‍ಗಳು ಸಂಚರಿಸುತ್ತಿವೆ. ನಿಲ್ದಾಣದೊಳಗೆ ಖಾಸಗಿ ಬಸ್ ನಿಲ್ಲಲು ಅವಕಾಶವಿಲ್ಲ. ಆದರೆ ಹೊರಾಂಗಣದಲ್ಲಿ ಬಸ್ಸುಗಳನ್ನು ನಿಲ್ಲಿಸಲಾಗಿದೆ.

ಇದನ್ನೂ ಓದಿ  | ಶಿವಮೊಗ್ಗ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಖಾಲಿ ಖಾಲಿ, ಹೇಗಿದೆ ಮುಷ್ಕರ? ಬರ್ತಿದ್ದಾರಾ ಸಿಬ್ಬಂದಿಗಳು?

ಬೆಂಗಳೂರು, ಮೈಸೂರು, ಹರಿಹರ – ದಾವಣಗೆರೆ ಸೇರಿದಂತೆ ವಿವಿಧೆಡೆ ಖಾಸಗಿ ಬಸ್ಸುಗಳು ಸಂಚಾರಿಸುತ್ತಿವೆ. ಬೆಳಗ್ಗೆಯಿಂದಲೇ ಟೂರಿಸ್ಟ್ ಬಸ್ಸುಗಳು ಸೇರಿದಂತೆ ವಿವಿಧ ಪರ್ಮಿಟ್ ಹೊಂದಿರುವ ಬಸ್ಸುಗಳು ಪ್ರಯಾಣಿಕರನ್ನು ಕರೆದೊಯ್ಯುತ್ತಿವೆ.

ದುಬಾರಿ ದರ ಇಲ್ಲ

ಕೆಎಸ್‍ಆರ್‍ಟಿಸಿ ನೌಕರರ ಮುಷ್ಕರದ ಹಿನ್ನೆಲೆ ಖಾಸಗಿ ಬಸ್ಸುಗಳ ಸಿಬ್ಬಂದಿ ದುಬಾರಿ ದರವನ್ನು ವಸೂಲಿ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಹಾಗಾಗಿ ಶಿವಮೊಗ್ಗದಿಂದ ಸಂಚರಿಸುತ್ತಿರುವ ಖಾಸಗಿ ಬಸ್ಸುಗಳಲ್ಲಿ ದುಬಾರಿ ದರ ಪಡೆಯುತ್ತಿಲ್ಲ ಎಂದು ಬಸ್‌ ಸಿಬ್ಬಂದಿ ಹೇಳುತ್ತಿದ್ದಾರೆ. ಆದರೆ ಸರ್ಕಾರಿ ಬಸ್ಸಿಗೆ ಹೋಲಿಸಿದೆ ಟಿಕೆಟ್‌ ದರ ಹೆಚ್ಚಿದೆ ಎಂದು ಪ್ರಯಾಣಿಕರು ತಿಳಿಸುತ್ತಿದ್ದಾರೆ.

ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಖಾಸಗಿ ಬಸ್‌ | ವಿಡಿಯೋ ರಿಪೋರ್ಟ್‌

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment