ಹಳೆ ಜೈಲು ಆವರಣದಲ್ಲಿ ಡಿಜಿಪಿ ಭೇಟಿಯಾದ ಬಿಜೆಪಿ ಯುವ ಮೋರ್ಚಾ, ಡ್ರಗ್ಸ್ ದಂಧೆ ವಿರುದ್ಧ ಆಕ್ರೋಶ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021

ರಾಜ್ಯದಲ್ಲಿ ಡ್ರಗ್ಸ್‌ ದಂಧೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ದಂಧೆಕೋರರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಶಿವಮೊಗ್ಗದಲ್ಲಿ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಹಳೆ ಜೈಲು ಆವರಣದಲ್ಲಿ ಡಿಜಿಪಿ ಪ್ರವೀಣ್‌ ಸೂದ್‌ ಅವರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಡ್ರಗ್ಸ್‌ ದಂಧೆಕೋರರಿಂದಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಶಾಂತಿ, ಸುವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಈ ಸಂಬಂಧ ಶಿವಮೊಗ್ಗ ನಗರದ ಪೊಲೀಸ್‌ ಠಾಣೆಗಳಲ್ಲೂ ದೂರು ದಾಖಲಿಸಿದ್ದೇವೆ. ತಮ್ಮ ವ್ಯಾಪ್ತಿಯಲ್ಲೂ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಯುವ ಮೋರ್ಚಾ ಅಧ್ಯಕ್ಷ ದರ್ಶನ್‌, ನಗರ ಪ್ರಧಾನ ಕಾರ್ಯದರ್ಶಿ ಬಳ್ಳೆಕೆರೆ ಸಂತೋಷ್‌, ಜಗನ್ನಾಥ್‌ ಟಿ.ಆರ್‌, ಅಭಿಷೇಕ್‌, ಮಹೇಶ್‌, ಪ್ರೀತಂ, ನಿತಿನ್‌, ಯುವರಾಜ್‌, ಗುರು ಶೇಟ್‌, ಮೋಹನ್‌, ಪೃಥ್ವಿ ಗೌಡ, ಶರತ್‌, ದಿನೇಶ್‌ ಆಚಾರ್ಯ, ಸುಹಾಶ್‌ ಶಾಸ್ತ್ರಿ, ಸಂಜಯ್‌ ಸೇರಿದಂತೆ ಹಲವರು ಇದ್ದರು.

ಯುವ ಮೋರ್ಚಾ ಮನವಿ ನೀಡಿದ ವಿಡಿಯೋ ರಿಪೋರ್ಟ್


ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment