ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 APRIL 2021
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಒಂದೇ ದಿನ 50ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಇದು ಸೋಂಕು ವ್ಯಾಪಕವಾಗಿ ಹರಡುವ ಭೀತಿ ಹುಟ್ಟಿಸಿದೆ.
ಗುರುವಾರ ಶಿವಮೊಗ್ಗ ಜಿಲ್ಲೆಯಲ್ಲಿ 2111 ಮಂದಿಯ ಮಾದರಿಯನ್ನು ಪಡೆಯಲಾಗಿದೆ. 2039 ಮಂದಿಯ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 52 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ಇವತ್ತು ಪತ್ತೆಯಾದ ಸೋಂಕಿತರ ಪೈಕಿ ಶಿವಮೊಗ್ಗದ 32, ಭದ್ರಾವತಿಯ 7, ಶಿಕಾರಿಪುರದ 1, ತೀರ್ಥಹಳ್ಳಿ 1, ಸೊರಬದ 1, ಹೊಸನಗರದ 5, ಸಾಗರದ 7 ಮಂದಿ ಇದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ 112 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 41 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 215 ಮಂದಿ ಮನೆಯಲ್ಲಿ ಐಸೊಲೇಷನ್ನಲ್ಲಿದ್ದು ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಸದ್ಯ 368 ಮಂದಿ ಸೋಂಕಿತರಿದ್ದಾರೆ.
ಮತ್ತೊಂದೆಡೆ ಜಿಲ್ಲೆಯ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದ 18 ಮಂದಿ ಕರೋನದಿಂದ ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






