ರಸಗೊಬ್ಬರಕ್ಕೆ ಹೆಚ್ಚಿನ ದರ ವಿಧಿಸಿದರೆ ಮಾರಾಟಗಾರರ ವಿರುದ್ಧ ಕೇಸ್, ಪರವಾನಗಿ ರದ್ದು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 APRIL 2021

ರಸಗೊಬ್ಬರ ಮಾರಾಟಗಾರರು ನಿಗದಿಗಿಂತಲೂ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ರೈತರು ದೂರು ನೀಡಬಹುದು ಎಂದು ಶಿವಮೊಗ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ರೈತರ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಕೆಯ ಕಚೇರಿಯಲ್ಲಿ ದೂರು ದಾಖಲಿಸಬಹುದಾಗಿದೆ.

2021ರ ಏಪ್ರಿಲ್ 01 ರಿಂದ ರಸಗೊಬ್ಬರ ಧಾರಣೆ ಏರಿಕೆಯಾಗಿದೆ ಎಂಬ ನೆಪವೊಡ್ಡಿ, ಲಭ್ಯವಿರುವ ದಾಸ್ತಾನಿನ ರಸಗೊಬ್ಬರ ಚೀಲಗಳ ಮೇಲೆ ಮುದ್ರಿತವಾಗಿರುವ ದರಕ್ಕಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುವಂತಿಲ್ಲ. ಈ ರೀತಿ ಮಾರಾಟ ಮಾಡಿದರೆ ರಸಗೊಬ್ಬರ ನಿಯಂತ್ರಣ ಆದೇಶ 1985ರ ಅನ್ವಯ ಕಾನೂನು ರೀತಿ ವಂಚನೆಯ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ದಲ್ಲಿ, ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment