ಸಾಗರ ನಗರಸಭೆ ಅಧಿಕಾರಿಗಳಿಗೆ ಶಾಕ್ ಕೊಟ್ಟರು ಶಾಸಕ ಹಾಲಪ್ಪ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

169156601 1095982247548351 4823304453913451213 n.jpg? nc cat=109&ccb=1 3& nc sid=8bfeb9& nc ohc=lzqbq8nu4bMAX8m5ozk& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಚೇರಿಗೆ ಲೇಟಾಗಿ ಬಂದ ಅಧಿಕಾರಿಗಳ ವಿರುದ್ಧ ಶಾಸಕರು ಗರಂ ಆಗಿದ್ದಾರೆ. ಸಮಯಕ್ಕೆ ಸರಿಯಾಗಿ ಬಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಸಾಗರ ನಗರಸಭೆಯಲ್ಲಿ  ಇವತ್ತು ಆಶ್ರಯ ಸಮಿತಿ ಸಭೆ ನಿಗದಿಯಾಗಿತ್ತು. ಬೆಳಗ್ಗೆ 10.30ಕ್ಕೆ  ಶಾಸಕ ಹರತಾಳು ಹಾಲಪ್ಪ ಅವರು ನಗರಸಭೆಗೆ ಆಗಮಿಸಿದರು. ಈ ವೇಳೆ ಹಲವು ಅಧಿಕಾರಿಗಳು ಇನ್ನೂ ಕಚೇರಿಗೆ ಆಗಮಿಸಿರಲಿಲ್ಲ. ಇದನ್ನು ಕಂಡು ಶಾಸಕ ಹಾಲಪ್ಪ ಕೆಂಡಾಮಂಡಲವಾದರು.

ಹಾಜರಾತಿ ಪುಸ್ತಕ ವಿಳಂಬಕ್ಕೆ ಗರಂ

ನಗರಸಭೆ ಆವರಣದಲ್ಲಿಯೇ ನಿಂತು, ಹಾಜರಾತಿ ಪುಸ್ತಕ ತರುವಂತೆ ಅಧಿಕಾರಿಯೊಬ್ಬರಿಗೆ ಸೂಚಿಸಿದರು. ಈ ವೇಳೆ ಹಾಜರಾತಿ ಪುಸ್ತಕ ತರಲು ವಿಳಂಬ ಮಾಡಿದ ಅಧಿಕಾರಿ ವಿರುದ್ಧವು ಶಾಸಕ ಹರತಾಳು ಹಾಲಪ್ಪ ಸಿಟ್ಟಾದರು. ಬಳಿಕ ಹಾಜರಾತಿ ಪುಸ್ತಕ ಹಿಡಿದು, ನಿಗದಿತ ಸಮಯಕ್ಕೆ ಬಾರದ ಅಧಿಕಾರಿಗಳ ಪಟ್ಟಿ ಸಿದ್ಧಪಡಿಸಿದರು. ಜಿಲ್ಲಾಧಿಕಾರಿ ಅವರಿಗೆ ಕರೆ ಮಾಡಿ, ಈ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದರು.

ಶಾಸಕ ಹಾಲಪ್ಪ ಭೇಟಿಯ ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment