ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021
ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಒಂದೇ ದಿನ 146 ಮಂದಿಗೆ ಪಾಸಿಟಿವ್ ಬಂದಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 679ಕ್ಕೆ ಹೆಚ್ಚಳವಾಗಿದೆ. ಮತ್ತೊಂದೆಡೆ ಇವತ್ತು ಕೂಡ ಕರೋನದಿಂದಾಗಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ.

ಶಿವಮೊಗ್ಗದಲ್ಲಿ ಇವತ್ತು 2773 ಮಂದಿಯ ಸ್ಯಾಂಪಲ್ಗಳನ್ನ ಪಡೆಯಲಾಗಿದೆ. ಈ ಪೈಕಿ 1816 ಮಂದಿಗೆ ನೆಗೆಟಿವ್ ಬಂದಿದೆ. ಮತ್ತೊಬ್ಬ ಸೋಂಕಿತ ಸಾವನ್ನಪ್ಪಿದ್ದು, ಈತನ ಮೃತರ ಸಂಖ್ಯೆ 354ಕ್ಕೆ ಹೆಚ್ಚಳವಾಗಿದೆ.
ಯಾವ್ಯಾವ ತಾಲೂಕಲ್ಲಿ ಎಷ್ಟು?
ಶಿವಮೊಗ್ಗ ತಾಲೂಕಿನಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಶಿವಮೊಗ್ಗದಲ್ಲಿ 78, ಭದ್ರಾವತಿ 17, ಶಿಕಾರಿಪುರ 13, ತೀರ್ಥಹಳ್ಳಿ 6, ಸೊರಬ 5, ಸಾಗರ 16, ಹೊಸನಗರ 7, ಇತರೆ ಜಿಲ್ಲೆಯಿಂದ ಬಂದವರು 4 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇನ್ನು, ಒಟ್ಟು ಸೋಂಕಿತರ ಪೈಕಿ 177 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 79 ಸೋಂಕಿತರು ಖಾಸಗಿ ಆಸ್ಪತ್ರೆಯಲ್ಲಿ, 392 ಮಂದಿ ಹೋಂ ಐಸೊಲೇಷನ್ನಲ್ಲಿ, 31 ಮಂದಿ ಟ್ರೈಯೇಜ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






