ಶಿವಮೊಗ್ಗ ಜಿಲ್ಲೆಯಲ್ಲಿ ಸಾವಿರದ ಗಡಿ ದಾಟಿದ ಒಟ್ಟು ಸೋಂಕಿತರ ಸಂಖ್ಯೆ, ಇವತ್ತೆಷ್ಟು ಮಂದಿಗೆ ಪಾಸಿಟಿವ್ ಬಂದಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 APRIL 2021

ಶಿವಮೊಗ್ಗದಲ್ಲಿ ಇವತ್ತು 244 ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್‍ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. ಈ ವಾರದಲ್ಲಿ ಇದು ಮೂರನೆ ಬಾರಿಗೆ ಸೋಂಕಿತರ ಸಂಖ್ಯೆ ಇನ್ನೂರರ ಗಡಿ ದಾಟಿದೆ.

Covid 19 Vaccination Kan poster 1 1

ಜಿಲ್ಲೆಯಲ್ಲಿ ಇವತ್ತು 3213 ಮಂದಿಯ ಸ್ಯಾಂಪಲ್ ಪಡೆಯಲಾಗಿದೆ. 2228 ಮಂದಿಯ ಸ್ಯಾಂಪಲ್ ನೆಗೆಟಿವ್ ಬಂದಿದೆ. ಮತ್ತೊಂದೆಡೆ ಒಬ್ಬ ಸೋಂಕಿತ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್‍ನಿಂದ ಮೃತರಾದವರ ಸಂಖ್ಯೆ 358ಕ್ಕೆ ಏರಿಕೆಯಾಗಿದೆ.

ತಾಲೂಕುವಾರು ಎಷ್ಟೆಷ್ಟು ಕೇಸ್?

ಶಿವಮೊಗ್ಗ ತಾಲೂಕಿನಲ್ಲಿ 118 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 35, ಶಿಕಾರಿಪುರದಲ್ಲಿ 18, ತೀರ್ಥಹಳ್ಳಿಯಲ್ಲಿ 29, ಸೊರಬದಲ್ಲಿ 11, ಸಾಗರದಲ್ಲಿ 15, ಹೊಸನಗರದಲ್ಲಿ 6, ಹೊರ ಜಿಲ್ಲೆಯಿಂದ ಬಂದವರ ಪೈಕಿ 12 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸಾವಿರದ ಗಡಿ ದಾಟಿದ ಸೋಂಕಿತರು

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಸಾವಿರಕ್ಕಿಂತಲೂ ಹೆಚ್ಚಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದೆ. ಈ ಪೈಕಿ 844 ಸೋಂಕಿತರು ಹೋಂ ಐಸೊಲೇಷನ್‍ನಲ್ಲಿದ್ದಾರೆ. 296 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 104, ಟ್ರೈಏಜ್‍ನಲ್ಲಿ 63 ಮಂದಿ ಚಿಕಿತ್ಸೆಯಲ್ಲಿದ್ದಾರೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment