ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 APRIL 2021
ಒಂದೆಡೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೆ ಮತ್ತೊಂದೆಡೆ ಶಿವಮೊಗ್ಗದಲ್ಲಿ ಇವತ್ತು ದಾಖಲೆ ಪ್ರಮಾಣದ ಕರೋನ ಕೇಸ್ಗಳು ಪತ್ತೆಯಾಗಿವೆ.
ಎರಡನೆ ಅಲೆಯಲ್ಲಿ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಷ್ಟೊಂದು ಕರೋನ ಪ್ರಕರಣಗಳು ಪತ್ತೆಯಾಗಿವೆ. ಶಿವಮೊಗ್ಗದಲ್ಲಿ ಇವತ್ತು 314 ಮಂದಿಯಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ ಒಂದೂವರೆ ಸಾವಿರದ ಸನಿಹಕ್ಕೆ ತಲುಪಿದೆ. ಇನ್ನು, ಮೃತರ ಸಂಖ್ಯೆಯು ಏರಿಕೆಯಾಗಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕೇಸ್?
ಶಿವಮೊಗ್ಗ ತಾಲೂಕಿನಲ್ಲಿ 123, ಭದ್ರಾವತಿ 79, ಶಿಕಾರಿಪುರ 8, ತೀರ್ಥಹಳ್ಳಿ 7, ಸೊರಬ 26, ಸಾಗರ 29, ಹೊಸನಗರ 28, ಹೊರ ಜಿಲ್ಲೆಯಿಂದ ಬಂದ 14 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಒಂದೂವರೆ ಸಾವಿರ ಸನಿಹಕ್ಕೆ ಒಟ್ಟು ಸೋಂಕಿತರು
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಒಂದೂವರೆ ಸಾವಿರದ ಸನಿಹಕ್ಕೆ ತಲುಪಿದೆ. ಸದ್ಯ 1470 ಸೋಂಕಿತರಿದ್ದಾರೆ. ಈ ಪೈಕಿ ಕೋವಿಡ್ ಆಸ್ಪತ್ರೆಯಲ್ಲಿ 240 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು, ಖಾಸಗಿ ಆಸ್ಪತ್ರೆಯಲ್ಲಿ 165 ಮಂದಿ, ಟ್ರೈಯೇಜ್ನಲ್ಲಿ 21 ಮಂದಿ ಚಕಿತ್ಸೆಯಲ್ಲಿದ್ದಾರೆ. 1044 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ.
ಏರುತ್ತಿದೆ ಮೃತರ ಸಂಖ್ಯೆ
ಕರೋನ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ದಿನೆ ದಿನೆ ಹೆಚ್ಚಳವಾಗುತ್ತಿದೆ. ಇವತ್ತು ಕರೋನ ಸೋಂಕಿಗೆ ತುತ್ತಾದ ಮೂವರು ಸಾವನ್ನಪ್ಪಿದ್ದಾರೆ. ಇದರಿಂದ ಒಟ್ಟು ಸಾವನ್ನಪ್ಪಿದ್ದವರ ಸಂಖ್ಯೆ 362ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






