ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಬೆಂಗಳೂರು : ವ್ಯಾಪಕವಾಗಿ ಹರಡುತ್ತಿರುವ ಕರೋನ ಸೋಂಕು ತಡೆಯಲು ಮತ್ತೊಮ್ಮೆ ಬಿಗಿ ಕ್ರಮ ಕೈಗೊಂಡಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. 14 ದಿನ ಬಿಗಿ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನ ಕೈಗೊಂಡಿದೆ
ಸಭೆ ಬಳಿಕ ಸಿಎಂ ಹೇಳಿದ್ದೇನು?
ಸಚಿವ ಸಂಪುಟ ಸದಸ್ಯರು, ತಜ್ಱರ ಜೊತೆ ಸಭೆಯನ್ನು ನಡೆಸಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ 18 -45 ವರ್ಷದವರಿಗೆ ವ್ಯಾಕ್ಸಿನ್ ಉಚಿತವಾಗಿ ಕೊಡುತ್ತೇವೆ. ಈ ಬಗ್ಗೆ ಆರೋಗ್ಯ ಇಲಾಖೆ ರೂಪುರೇಷೆ ಸಿದ್ಧಪಡಿಸುತ್ತದೆ. 45 ವರ್ಷ ಮೇಲ್ಪಟ್ಟವರಿಗೆ ಕೇಂದ್ರದಲ್ಲಿ
ನಾಳೆ (27 ಏಪ್ರಿಲ್) ರಾತ್ರಿಯಿಂದ 14 ದಿನ ಬಿಗಿ ಕ್ರಮ ಜಾರಿಯಲ್ಲಿರುತ್ತೆ. ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ.
ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.
10 ಗಂಟೆ ಬಳಿಕ ಎಲ್ಲ ಅಂಗಡಿಗಳು ಬಾಗಿಲು ಹಾಕಬೇಕು.
ಉತ್ಪಾದನಾ ಕ್ಷೇತ್ರ , ಕೃಷಿ ಕ್ಷೇತ್ರಕ್ಕೆ ಯಾವುದೆ ತೊಂದರೆ ಇಲ್ಲ. ಎಮರ್ಜನ್ಸಿ, ಮೆಡಿಕಲ್ ಕ್ಷೇತ್ರ ಮುಂದುವರೆಯಲಿದೆ.
ಎರಡು ವಾರದಲ್ಲಿ ಕರೋನ ಕಂಟ್ರೋಲ್ಗೆ ಬಾರದೆ ಇದ್ದರೆ, ಬಿಗಿ ಕ್ರಮ ಮುಂದುವರೆಯಲಿದೆ.
ಕೆಎಸ್ಆರ್ಟಿಸಿ ಬಸ್ ಸಂಚಾರ ಇರುವುದಿಲ್ಲ. ಗೂಡ್ಸ್ ಸಾಗಣೆ ಮಾಡಲು ಯಾವುದೆ ಅಡ್ಡಿಯಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422