ಜಿಲ್ಲಾ ರಕ್ಷಣಾಧಿಕಾರಿ ಮಾನವೀಯತೆ, ಇನ್ಸ್​ಪೆಕ್ಟರ್​ ಬಿಗಿಪಟ್ಟು, ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ದಿಢೀರ್ ಕಾರ್ಯಾಚರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021

ದಿಢೀರ್ ಕಾರ್ಯಾಚರಣೆ ನಡೆಸಿದ ನಿರಾಶ್ರಿತರ ಪರಿಹಾರ ಕೇಂದ್ರದ ಸಿಬ್ಬಂದಿಗಳು, ಶಿವಮೊಗ್ಗ ನಗರದಾದ್ಯಂತ ಇವತ್ತು ನಿರ್ಗತಿಕರನ್ನು ಪರಿಹಾರ ಕೇಂದ್ರಕ್ಕೆ ರವಾನಿಸಿದ್ದಾರೆ.

Covid 19 Vaccination Kan poster 1 1

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಕೆಲ ಸಮಯದಿಂದ ನಿರ್ಗತಿಕರು ಹೆಚ್ಚಿದ್ದರು. ಇವತ್ತು ವಾಹನದೊಂದಿಗೆ ಬಂದ ಪರಿಹಾರ ಕೇಂದ್ರದ ಸಿಬ್ಬಂದಿಗಳು, ಕಾರ್ಯಾಚರಣೆ ನಡೆಸಿ ನಿರ್ಗತಿಕರು, ಭಿಕ್ಷುಕರನ್ನು ಕರೆದೊಯ್ದರು.

ಜಿಲ್ಲಾ ರಕ್ಷಣಾಧಿಕಾರಿ ಮಾನವೀಯತೆ

ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ನಿರ್ಗತಿಕರು ಇರುವುದನ್ನು ಗಮನಿಸಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್‍, ಅವರನ್ನೆಲ್ಲ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಸಿಇಎನ್ ಠಾಣೆ ಇನ್ಸ್‍ಪೆಕ್ಟರ್ ಗುರುರಾಜ್ ಅವರಿಗೆ ಇದರ ಜವಾಬ್ದಾರಿ ಹೊರಿಸಿದ್ದರು. ನಿರ್ಗತಿಕರನ್ನು ಗುರುತಿಸಿದ ಗುರುರಾಜ್ ಅವರು ಪರಿಹಾರ ಕೇಂದ್ರಕ್ಕೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದರು.

ಎಲ್ಲೆಲ್ಲಿ ಕಾರ್ಯಾಚರಣೆ ನಡೆಯಿತು?

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣ, ಬಿ.ಹೆಚ್.ರಸ್ತೆ, ಮಹಾನಗರ ಪಾಲಿಕೆ ಸಮೀಪ, ನೆಹರೂ ರೋಡ್ ಸೇರಿದಂತೆ ವಿವಿಧೆಡೆ ಕಾರ್ಯಚರಣೆ ನಡೆಸಲಾಯಿತು. ಇದರ ವಿಡಿಯೋ ವರದಿ ಇಲ್ಲಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment