ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021
ಲಾಕ್ಡೌನ್ ಮಾದರಿ ಕರ್ಫ್ಯೂ ಜಾರಿಯಾದ ಮೊದಲ ದಿನವೇ ಜಿಲ್ಲೆಯಾದ್ಯಂತ ನೂರು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಯಮ ಉಲ್ಲಂಘನೆ ಮಾಡಿ ರಸ್ತೆಗಿಳಿದರೆ ವಾಹನಗಳನ್ನು ಸೀಜ್ ಮಾಡುವುದಾಗಿ ಎಚ್ಚರಿಕೆ ನೀಡಿದರೂ, ಹಲವರು ರಸ್ತೆಗಿಳಿದಿದ್ದರು. ಈ ಹಿನ್ನೆಲೆಯಲ್ಲಿ 88 ದ್ವಿಚಕ್ರ ವಾಹನಗಳು, 12 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಮೋಟರ್ ವೆಹಿಕಲ್ ಕಾಯ್ದೆ ಅಡಿ 245 ಪ್ರಕರಣಗಳನ್ನು ದಾಖಲು ಮಾಡಿ, 1,16,600 ದಂಡ ವಿಧಿಸಲಾಗಿದೆ.
ವಿನೋಬನಗರದಲ್ಲಿ ಒಂದು ಕೇಸ್
ಮತ್ತೊಂದೆಡೆ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿ ಒಂದು ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]