ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 4 MAY 2021
ಕರೋನ ಭೀತಿ ನಡುವೆ ಜಿಲ್ಲೆಯಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್ಡಿ) ಆತಂಕ ಶುರುವಾಗಿದೆ. ಸಾಗರ ತಾಲೂಕಿನ ಯುವಕನೊಬ್ಬನಿಗೆ ಕೆಎಫ್ಡಿ ಪಾಸಿಟಿವ್ ಬಂದಿದೆ.
ಸಾಗರ ತಾಲೂಕು ತ್ಯಾಗರ್ತಿ ಸಮೀಪದ ಬರೂರು ಬಳಿಯ ಮತ್ತಲಬೈಲಿನ ದೀಪಕ್ (18) ಎಂಬುವವರಿಗೆ ಕೆಎಫ್ಡಿ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ವಿದ್ಯಭ್ಯಾಸ ಮಾಡುತ್ತಿದ್ದ ದೀಪಕ್, ಲಾಕ್ಡೌನ್ ಹಿನ್ನೆಲೆ ಊರಿಗೆ ಮರಳಿದ್ದರು. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದೆ.
ತಾಲೂಕು ಉಪ ವಿಭಾಗೀಯ ಆಸ್ಪತ್ರೆಯಲ್ಲಿ ದೀಪಕ್ಗೆ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಮನೆಯಲ್ಲೇ ಚಿಕಿತ್ಸೆ ಮುಂದುವರೆಸಲು ವೈದ್ಯರು ಸೂಚಿಸಿದ್ದಾರೆ.
ಕೆಎಫ್ಡಿ ಆತಂಕ ಶುರು
ಎರಡು ವರ್ಷದ ಹಿಂದೆ ಕೆಎಫ್ಡಿಯಿಂದ ತಾಲೂಕಿನಲ್ಲಿ ದೊಡ್ಡ ಮಟ್ಟದ ಸಾವು ಸಂಭವಿಸಿತ್ತು. ಈಗ ಮತ್ತೊಮ್ಮೆ ಕೆಎಫ್ಡಿ ಆತಂಕ ಶುರುವಾಗಿದೆ. ತಾಲೂಕಿನಲ್ಲಿ ಈವರೆಗೆ 1548 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕಳೆದ 15 ದಿನದಿಂದ ಪರೀಕ್ಷಾ ಕಾರ್ಯ ನಡೆಯುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಎಸ್.ಮೋಹನ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






