ಶಿವಮೊಗ್ಗ ಜಿಲ್ಲಾಧಿಕಾರಿಗೆ ಕರೋನ ಪಾಸಿಟಿವ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 MAY 2021 ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರಿಗೆ ಕರೋನ ಸೋಂಕು ತಗುಲಿದೆ. ರೋಗ ಲಕ್ಷಣವಿಲ್ಲದ ಪಾಸಿಟಿವ್ ಬಂದ ಹಿನ್ನೆಲೆ, ಜಲ್ಲಾಧಿಕಾರಿಯವರು ಹೋಂ ಐಸೊಲೇಷನ್‍ಗೆ ಒಳಗಾಗಿದ್ದಾರೆ.

ಕರೋನ ತುರ್ತು ಸಂದರ್ಭ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿದ್ದರು. ಪರಿಸ್ಥಿತಿ ನಿಭಾಯಿಸುವ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದರು. ಮೆಗ್ಗಾನ್ ಆಸ್ಪತ್ರೆಗೂ ಭೇಟಿ ನೀಡುತ್ತಿದ್ದರು. ಈ ನಡುವೆ ಅವರಿಗೆ ಸೋಂಕು ತಗುಲಿದ್ದು, ಮನೆಯಿಂದಲೇ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಳೆದ ವರ್ಷ ಪ್ರಾಥಮಿಕ ಸಂಪರ್ಕಕ್ಕೆ ಒಳಗಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೋಂ ಐಸೊಲೇಷನ್‍ಗೆ ಒಳಗಾಗಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದವರೊಬ್ಬರಿಗೆ ಸೋಂಕು ತಗುಲಿತ್ತು. ಈ ಬಾರಿ ರೋಗ ಲಕ್ಷಣವಿಲ್ಲದಿದ್ದರೂ ಪಾಸಿಟಿವ್ ಬಂದ ಹಿನ್ನೆಲೆ ಹೋಂ ಐಸೊಲೇಷನ್‍ಗೆ ಒಳಗಾಗಿದ್ದಾರೆ.

ಬೇಗ ಗುಣವಾಗಿ ಬನ್ನಿ

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶೀಘ್ರ ಗುಣವಾಗಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹಾರೈಸಿದ್ದಾರೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪೋಸ್ಟ್ ಪ್ರಕಟಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment