ಒಂದೇ ದಿನ ಸಾವಿರಕ್ಕೂ ಹೆಚ್ಚು ಕೇಸ್, ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರದಲ್ಲೇ ಅತಿ ಹೆಚ್ಚು ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 MAY 2021

ಲಾಕ್‍ ಡೌನ್ ಮೊದಲ ದಿನವೇ ಭಾರಿ ಸಂಖ್ಯೆಯ ಕರೋನ ಪಾಸಿಟಿವ್‍ ಪ್ರಕರಣ ಪತ್ತೆಯಾಗಿದೆ. ಒಂದೇ ದಿನ ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಆತಂಕ ಇಮ್ಮಡಿಯಾಗಿಸಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 1049 ಮಂದಿಯಲ್ಲಿ ಕರೋನ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ತಾಲೂಕಿನಲ್ಲಿ 329, ಭದ್ರಾವತಿ 246, ಶಿಕಾರಿಪುರ 75, ತೀರ್ಥಹಳ್ಳಿ 49, ಸೊರಬ 114, ಸಾಗರ 167, ಹೊಸನಗರ 54, ಇತರೆ ಜಿಲ್ಲೆಯಿಂದ ಬಂದ 15 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇವತ್ತು ಹನ್ನೊಂದು ಮಂದಿ ಕರೋನ ಸೋಂಕಿತರು ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ 283 ಮಂದಿ ಕರೋನ ಸೋಂಕಿನಿಂದ ಗುಣವಾಗಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment