BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MAY 2021

ಹವಾಮಾನ ತಜ್ಞರ ಮಾಹಿತಿಯಂತೆ ನಾಳೆಯಿಂದ ಮುಂದಿನ 2-3 ದಿನಗಳ ಕಾಲ ರಾಜ್ಯದಲ್ಲಿ ಸಾಮಾನ್ಯದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚಿಸಿದ್ದಾರೆ.

ಈ ಸಂಬಂಧ ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಎಲ್ಲಾ ತಾಲೂಕುಗಳ ತಹಶಿಲ್ದಾರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಅಗತ್ಯ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಮುಂಗಾರು ಮಳೆಯಿಂದ ಸಂಭವಿಸಬಹುದಾದ ಜೀವ ಮತ್ತು ಪ್ರಾಣ ಹಾನಿಗಳನ್ನು ನಿಯಂತ್ರಿಸುವ ಕಾರ್ಯದಲ್ಲಿ ರಕ್ಷಣಾ, ಕಂದಾಯ, ಅಗ್ನಿಶಾಮಕ,  ಮೆಸ್ಕಾಂ ಹಾಗೂ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿದ್ದತೆಗಳನ್ನು ಕೈಗೊಂಡು ಸದಾ ಸನ್ನದ್ಧರಾಗಿರುವಂತೆ ಸೂಚಿಸಿದರು. ಮುಂಗಾರು ಮಳೆಯಿಂದಾಗುವ ಅನಾಹುತದ ಪರಿಹಾರ ಕಾರ್ಯಗಳಿಗೆ ತಾಲೂಕುವಾರು 25ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗುವುದು ಎಂದರು.

ಇದೆ ಸಂದರ್ಭದಲ್ಲಿ ಸಕಾಲಕ್ಕೆ ನೆರವಿಗೆ ಧಾವಿಸುವ ಪ್ರಕೃತಿ ವಿಕೋಪ ಕಾರ್ಯಾಚರಣೆ ತಂಡದ ಸದಸ್ಯರ ಮೊಬೈಲ್ ನಂಬರ್‍ಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳುವಂತೆ ಹಾಗೂ ಮಳೆಗಾಳಿಯಿಂದ ಧರೆಗುರುಳುವ ಮರಗಳನ್ನು ತೆರವುಗೊಳಿಸಲು ಅಗತ್ಯ ಸಿಬ್ಬಂದಿಗಳನ್ನು ಸಿದ್ದವಾಗಿರಲು ಸೂಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಚರಂಡಿಗಳು ಸರಾಗವಾಗಿ ಮಳೆ ನೀರನ್ನು ಹರಿಯುವಂತೆ ಸ್ವಚ್ಚವಾಗಿಟ್ಟುಕೊಳ್ಳುವಲ್ಲಿ ಕ್ರಮ ಕೈಗೊಳ್ಳುವಂತೆ ಹಾಗೂ ಮಳೆ ಹಾನಿಯಿಂದ ರಕ್ಷಣೆಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪ್ರತ್ಯೇಕ ಸಹಾಯವಾಣಿ ಕೇಂದ್ರವನ್ನು ತೆರೆದು ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 14, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment