ಕರೋನ ತಡೆಗೆ ಸ್ವಯಂ ಲಾಕ್ ಡೌನ್ ಆದ ಹಳ್ಳಿ, ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಎರಡು ಸಾವಿರ ದಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MAY 2021

ಹಳ್ಳಿ ಹಳ್ಳಿಯಲ್ಲೂ ಸೋಂಕು ಹರಡವುದನ್ನು ತಡೆಯಲು ಗ್ರಾಮಸ್ಥರೆ ಸ್ವಯಂ ನಿರ್ಬಂಧಗಳನ್ನು ವಿಧಿಸಿಕೊಳ್ಳುತ್ತಿದ್ದಾರೆ. ಶಿವಮೊಗ್ಗ ತಾಲೂಕಿನ ಹಳ್ಳಿಯೊಂದು ಕೋವಿಡ್ ಸೋಂಕು ವ್ಯಾಪಕಗೊಳ್ಳುವುದನ್ನು ತಡೆಯಲು ಸ್ವಯಂ ಲಾಕ್‍ ಡೌನ್ ವಿಧಿಸಿಕೊಂಡಿದೆ.

ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ಊರಿನ ಪ್ರಮುಖರೊಬ್ಬರು ಕೋವಿಡ್‍ಗೆ ತುತ್ತಾಗಿ ಮೃತರಾಗಿದ್ದಾರೆ. ಆ ಬಳಿಕ ಗ್ರಾಮಸ್ಥರು ಸಭೆ ಸೇರಿ, ಒಂದು ವಾಹನ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ.

ಹೇಗಿದೆ ಸ್ವಯಂ ನಿರ್ಬಂಧ?

ಶಿವಮೊಗ್ಗ ತಾಲೂಕು ಹಾರನಹಳ್ಳಿ ಹೋಬಳಿಯ ನಾರಾಯಣಪುರ ಗ್ರಾಮದಲ್ಲಿ  ಸ್ವಯಂ ಲಾಕ್‍ ಡೌನ್ ವಿಧಿಸಿಕೊಳ್ಳಲಾಗಿದೆ. ಗ್ರಾಮದಲ್ಲಿ ಸೋಂಕು ಕಡಿಮೆಯಾಗುವವರೆಗೆ ಲಾಕ್‍ ಡೌನ್ ಮುಂದುವರೆಯಲಿದೆ ಎಂದು ಗ್ರಾಮದ ಮುಖಂಡರಲ್ಲಿ ಒಬ್ಬರಾದ ಕುಮಾರ್ ನಾಯ್ಕ ಶಿವಮೊಗ್ಗ ಲೈವ್‍.ಕಾಂಗೆ ತಿಳಿಸಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ಕಠಿಣ ಲಾಕ್‌ಡೌನ್ ಮುಂದುವರಿಕೆ

ನಾರಾಯಣಪುರದಲ್ಲಿ ಸುಮಾರು 350 ಮನೆಗಳಿವೆ. ಒಂದೂವರೆ ಸಾವಿರದಷ್ಟು ಜನಸಂಖ್ಯೆ ಇದೆ. ಸದ್ಯ 40 ರಿಂದ 45 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸುಮಾರು ಹತ್ತು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರೋನಾಗೆ ತುತ್ತಾಗಿದ್ದ ಗ್ರಾಮದ ಪ್ರಮುಖರಾದ ಹೇಮ್ಲಾನಾಯ್ಕ ಆವರು ಮೃತರಾಗಿದ್ದಾರೆ. ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇದೆ ಕಾರಣಕ್ಕೆ ಸಭೆ ಸೇರಿ ಸ್ವಯಂ ಲಾಕ್‍ ಡೌನ್‍ಗೆ ಒಳಗಾಗಿದ್ದಾರೆ.

ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ

ಪ್ರತಿದಿನ ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಈ ಅವಧಿ ಮೀರಿ ಮನೆಯಿಂದ ಹೊರ ಬಂದರೆ ಎರಡು ಸಾವಿರ ರೂ. ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ. ಬೆಳಗ್ಗೆ ಒಂಭತ್ತು ಗಂಟೆ ಬಳಿಕವು ಅಂಗಡಿ ತೆಗೆದಿದ್ದರೆ ಮಾಲೀಕರಿಗೆ ಹತ್ತು ಸಾವಿರ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ.

‘ಗ್ರಾಮದಲ್ಲಿ ಬಡವರಿದ್ದಾರೆ. ಅವರಿಗೆ ಸರ್ಕಾರದಿಂದ ರೇಷನ್ ಪೂರೈಕೆ ಮಾಡಲಾಗಿದೆ. ಒಂದು ವೇಳೆ ಇದನ್ನು ಮೀರಿ ಅಗತ್ಯ ವಸ್ತುಗಳ ಬೇಕಿದ್ದರೆ ಊರಿನ ಮುಖಂಡರಿಗೆ ತಿಳಿಸಿದರೆ ದಿನಸಿ ಪೂರೈಕೆಗೆ ವ್ಯವಸ್ಥೆ ಮಾಡುತ್ತೇವೆ’ ಎಂದು ಕುಮಾರ್ ನಾಯ್ಕ ತಿಳಿಸಿದರು.

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸಾವಿನ ವಿಚಾರದಲ್ಲಿ ಸುಳ್ಳು ಲೆಕ್ಕ, ಶಾಸಕರಿಂದಲೇ ಗಂಭೀರ ಆರೋಪ

ಜನರು ಹೊರಗೆ ಓಡಾಡದಂತೆ ತಡೆಯಲು ಮತ್ತು ಪರ ಊರಿನ ಜನರು ನಾರಾಯಣಪುರದೊಳಗೆ ಬಾರದಂತೆ ನೋಡಿಕೊಳ್ಳಲು ಕೆಲವು ಯುವಕರಿಗೆ ಜವಾಬ್ದಾರಿ ನೀಡಲಾಗಿದೆ.

ಸ್ವಯಂ ಲಾಕ್‍ ಡೌನ್ ವಿಧಿಸಿಕೊಂಡು ನಾರಾಯಣಪುರ ಗ್ರಾಮದವರು ಇತರರಿಗೆ ಮಾದರಿಯಾಗಿದೆ. ಗ್ರಾಮಗಳ ಹಂತದಲ್ಲಿ ಈ ಮಾದರಿ ಅನುಸರಿಸಿದರೆ ಜಿಲ್ಲೆಯಲ್ಲಿ ಸೋಂಕು ತಡೆಗೆ ಅನುಕೂಲವಾಗಲಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 17, 2021

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

Leave a Comment