ಶಿವಮೊಗ್ಗದಲ್ಲಿ ಪಾಸಿಟಿವ್‌ಗಿಂತಲೂ ಹೆಚ್ಚು ಮಂದಿ ಗುಣ, ಸಾವಿನ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MAY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ಮತ್ತೆ ಕರೋನ ಆರ್ಭಟ ಹೆಚ್ಚಾಗಿದೆ. ಇವತ್ತು ಸಾವಿನ ಸಂಖ್ಯೆಯಲ್ಲಿ ಮತ್ತೆ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇದರಿಂದ ಮತ್ತೆ ಕರೋನ ಭೀತಿ ಉಂಟಾಗಿದೆ.

ಜಿಲ್ಲೆಯಲ್ಲಿ ಇವತ್ತು ಸೋಂಕಿಗೆ ತುತ್ತಾದ 19 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ಈವರೆಗೆ ಕರೋನದಿಂದ ಮೃತಪಟ್ಟವರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ.

ಇನ್ನು, ಜಿಲ್ಲೆಯಲ್ಲಿ ಇವತ್ತು 810 ಮಂದಿಗೆ ಸೋಂಕು ತಗುಲಿರುವುದಾಗಿ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 216 ಮಂದಿಗೆ ಪಾಸಿಟಿವ್‌ ಬಂದಿದೆ. ಭದ್ರಾವತಿಯಲ್ಲಿ 133, ತೀರ್ಥಹಳ್ಳಿಯಲ್ಲಿ 62, ಶಿಕಾರಿಪುರದಲ್ಲಿ 94, ಸಾಗರದಲ್ಲಿ 140, ಹೊಸನಗರದಲ್ಲಿ 19, ಸೊರಬದಲ್ಲಿ 128, ಇತರೆ ಜಿಲ್ಲೆಯಿಂದ ಬಂದಿರುವ 18 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮತ್ತೊಂದೆಡೆ ಇವತ್ತು ಪಾಸಿಟಿವ್‌ಗಿಂತಲೂ ಹೆಚ್ಚು ಮಂದಿ ಕರೋನದಿಂದ ಗುಣವಾಗಿದ್ದಾರೆ. 884 ಮಂದಿ ಗುಣವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸಕ್ರಿಯ ಕರೋನ ಪ್ರಕರಣಗಳು 6882ಕ್ಕೆ ಇಳಿಕೆಯಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment