ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸಾಗರ ತಾಲೂಕು ಆನಂದಪುರದಲ್ಲಿ ಒಂದು ವಾರ ಕಠಿಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೇ 25ರಿಂದು ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ.
ಲಾಕ್ ಡೌನ್ ಅವಧಿಯಲ್ಲಿ ಜನರು ಅನಗತ್ಯವಾಗಿ ರಸ್ತಗಿಳಿಯುವಂತಿಲ್ಲ. ವ್ಯಾಪಾರ, ವಹಿವಾಟಿಗೂ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ತುರ್ತು ಸಂದರ್ಭದ ಓಡಾಟಕ್ಕೆ ಅವಕಾಶವಿದೆ.

ಇನ್ನು, ಲಾಕ್ ಡೌನ್ ಸಂದರ್ಭ ಕೃಷಿ ಚಟುವಟಿಕೆಗೆ ಯಾವುದೆ ನಿರ್ಬಂಧವಿಲ್ಲ. ಆದರೆ ಎಲ್ಲಿಯೂ ಜನರು ಗುಂಪುಗೂಡುವಂತಿಲ್ಲ ಎಂದು ತಹಶೀಲ್ದಾರ್ ಅವರು ಸಭೆಯಲ್ಲಿ ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವರು ಸಭೆಯಲ್ಲಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

About The Editor
ನಿತಿನ್ ಆರ್.ಕೈದೊಟ್ಲು





