ಶಿವಮೊಗ್ಗ ಜಿಲ್ಲೆಯಲ್ಲಿ 25 ಸಾವಿರ ಫುಡ್ ಕಿಟ್ ವಿತರಣೆಗೆ ಪ್ಲಾನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021

ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 25 ಸಾವಿರ ದಿನಸಿ ಕಿಟ್‍ಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಸಂಸದ ಬಿ.ವೈ.ರಾಘವೇಂದ್ರ, ಭಾನುವಾರದಿಂದ ಒಂದು ವಾರದ ಅವಧಿಯಲ್ಲಿ ಒಂದೊಂದು ತಾಲೂಕಿನಲ್ಲಿ ವಿತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ ನಗರದಲ್ಲಿ ಮೇ 30ರಂದು ಕಿಟ್ ವಿತರಣೆ ಮಾಡಲಾಗುತ್ತದೆ. ತೀರ್ಥಹಳ್ಳಿ ಮೇ 31, ಹೊಸನಗರ 1 ಜೂನ್, ಸಾಗರ 1 ಜೂನ್, ಶಿವಮೊಗ್ಗ ತಾಲೂಕು, ಹೊಳೆಹೊನ್ನೂರು ಜೂನ್ 2, ಸೊರಬ ಜೂನ್ 3, ಭದ್ರಾವತಿ 4 ಜೂನ್‍, ಶಿಕಾರಿಪುರದಲ್ಲಿ ಜೂನ್‍ 5ರಂದು ಫುಡ್ ಕಿಟ್ ವಿತರಿಸಲಾಗುತ್ತದೆ ಎಂದು ಸಂಸದರ ಬಿ.ವೈ.ರಾಘವೇಂದ್ರ ತಿಳಿಸಿದರು.

ಸೇವಾ ಭಾರತಿ ಸಂಘಟನೆ ಮತ್ತು ಪ್ರೇರಣಾ ಟ್ರಸ್ಟ್ ವತಿಯಿಂದ ಈ ಫುಡ್ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ಆರ್‍ಎಸ್‍ಎಸ್‍ ಪ್ರಮುಖ ಪಟ್ಟಾಭಿರಾಮ್ ಮಾತನಾಡಿ, ಲಾಕ್ ಡೌನ್ ಮುಂದುವರೆಯಲಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಈ ಅವಧಿಯಲ್ಲಿ ಸಂಕಷ್ಟಕ್ಕೆ ಸಿಲುಕುವ ಕುಟುಂಬಗಳಿಗೆ ನೆರವಾಗಬೇಕು ಎಂಬ ಉದ್ದೇಶದಿಂದ  ಈ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯ ವಿಡಿಯೋ ವರದಿ ಇಲ್ಲಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಸುನೀತಾ ಅಣ್ಣಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment