ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಸಿಂಗಲ್ ಡಿಜಿಟ್​​ಗೆ ಇಳಿಕೆ, ಪಾಸಿಟಿವ್ ಪ್ರಕರಣ ಏರಿಕೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ. ಇದು ಜಿಲ್ಲೆಯ ಜನರಲ್ಲಿ ಸ್ವಲ್ಪ ನೆಮ್ಮದಿ ಮೂಡಿಸಿದೆ. ಇವತ್ತು ಕೋವಿಡ್‍ಗೆ 7 ಮಂದಿ ಬಲಿಯಾಗಿದ್ದಾರೆ. ಬಹು ದಿನದ ಬಳಿಕ ಸಾವಿನ ಸಂಖ್ಯೆ ಸಿಂಗಲ್ ಡಿಜಿಟ್‍ಗೆ ಇಳಿಕೆಯಾಗಿದೆ.

ಇನ್ನು, ಇವತ್ತು ಕರೋನ ಪಾಸಿಟಿವ್‍ ಸಂಖ್ಯೆ  927ಕ್ಕೆ ಏರಿಕೆಯಾಗಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನ 255 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 115, ತೀರ್ಥಹಳ್ಳಿಯಲ್ಲಿ 79, ಶಿಕಾರಿಪುರದಲ್ಲಿ 114, ಸಾಗರದಲ್ಲಿ 154, ಹೊಸನಗರದಲ್ಲಿ 104, ಸೊರಬದಲ್ಲಿ 69, ಇತರೆ ಜಿಲ್ಲೆಯಿಂದ ಬಂದಿರುವ 37 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಸಕ್ರಿಯ ಕರೋನ ಸೋಂಕಿತರ ಪ್ರಕರಣ 7333ಕ್ಕೆ ಏರಿಕೆಯಾಗಿದೆ. ಇನ್ನು, ಇವತ್ತು 847 ಮಂದಿ ಕರೋನದಿಂದ ಗುಣವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment