ಆಯನೂರಿನಲ್ಲಿ ಜನ ರಸ್ತೆಗಿಳಿಯುವಂತಿಲ್ಲ, ಅಂಗಡಿ ಬಾಗಿಲು ತೆಗೆಯವಂತಿಲ್ಲ, ಇವತ್ತಿಂದ ಮೂರು ದಿನ ಎಲ್ಲವು ಸ್ಥಬ್ಧ

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021 ➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಕರೋನ ನಿಯಂತ್ರಣಕ್ಕಾಗಿ ನಿಷೇಧಾಜ್ಞೆ ಜಾರಿಯಾಗಿರುವುದರಿಂದ ಇವತ್ತು ಆಯನೂರು ಸಂಪೂರ್ಣ ಸ್ಥಬ್ದವಾಗಿತ್ತು. ಜನ ಸಂಚಾರವಿಲ್ಲದೆ ರಸ್ತೆ ಖಾಲಿ ಖಾಲಿಯಾಗಿತ್ತು.

ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಠಿಣ ಲಾಕ್ ಡೌನ್ ಮಾಡಲಾಗಿದ್ದು, ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೂರು ದಿನ ನಿಷೇಧಾಜ್ಞೆ ಜಾರಿಯಲ್ಲಿರುತ್ತೆ. ಹಾಗಾಗಿ ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

ಜನರು ಮನೆಯಿಂದ ಹೊರ ಬರುವಂತಿಲ್ಲ, ಗುಂಪುಗೂಡುವಂತಿಲ್ಲ ಎಂದು ತಿಳಿಸಲಾಗಿದೆ. ಹಾಗಾಗಿ ಆಯನೂರು ಸರ್ಕಲ್‍ನಲ್ಲಿ ಜನ ಸಂಚಾರವಿರಲಿಲ್ಲ. ಪೊಲೀಸರು ಬ್ಯಾರಿಕೇಡ್ ಹಾಕಿ, ವಾಹನಗಳ ತಪಾಸಣೆ ನಡೆಸಿದರು.

ಇದನ್ನೂ ಓದಿ | ಶಿವಮೊಗ್ಗ ತಾಲೂಕು ಕೋಹಳ್ಳಿಯಲ್ಲಿ ಮೂರು ದಿನ ನಿಷೇಧಾಜ್ಞೆ, ಏನಿರುತ್ತೆ? ಏನಿರಲ್ಲ?

ಕೋಹಳ್ಳಿ ವ್ಯಾಪ್ತಿಯಲ್ಲಿ ಕರೋನ ವ್ಯಾಪಕವಾಗಿ ಹರಡುತ್ತಿದೆ. ಸಾಗರ, ಹೊಸನಗರ, ತೀರ್ಥಹಳ್ಳಿ ಕಡೆಯಿಂದ ಬರುವವರಿಗೆ ಆಯನೂರು ಸರ್ಕಲ್ ಪ್ರಮುಖ ಜಂಕ್ಷನ್ ಆಗಿದೆ. ಅಲ್ಲದೆ ಯಾವಾಗಲು ಇಲ್ಲಿ ಜನ ಗುಂಪುಗೂಡುವುದರಿಂದ ಕರೋನ ಹರಡುವ ಭೀತಿ ಇದೆ. ಹಾಗಾಗಿ ನಿಷೇಧಾಜ್ಞೆ ವಿಧಿಸಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು