ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 30 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಜಿಲ್ಲೆಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಘೋಷಣೆಯಾಗುತ್ತಿದ್ದಂತೆ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಇದರಿಂದ ತೀರ್ಥಹಳ್ಳಿ ಪಟ್ಟಣದಲ್ಲಿ ಇವತ್ತು ಜನ ಜಂಗುಳಿ, ವಾಹನ ದಟ್ಟಣೆ ಹೆಚ್ಚಾಗಿತ್ತು.
ಪಟ್ಟಣದ ದಿನಸಿ ಅಂಗಡಿಗಳು, ಕೃಷಿ ಪರಿಕರಗಳ ಮಾರಾಟ ಮಳಿಗೆ ಮುಂದೆ ಜನಜಂಗುಳಿ ಸೇರಿತ್ತು. ಎಲ್ಲಾ ಮಳಿಗೆಗಳ ಮುಂದೆಯೂ ಫುಲ್ ರಶ್ ಇದ್ದಿದ್ದರಿಂದ ಗ್ರಾಹಕರು ಬಹುಹೊತ್ತು ಕಾಯಬೇಕಾಯಿತು.
ಬಹುತೇಕರು ಕಾರುಗಳಲ್ಲಿ ಪಟ್ಟಣಕ್ಕೆ ಬಂದಿದ್ದರಿಂದ ಪಾರ್ಕಿಂಗ್ ಸಮಸ್ಯೆ ಉಂಟಾಯಿತು. ಹಾಗಾಗಿ ಹಲವರು ಮುಖ್ಯ ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸಿ ಖರೀದಿಗೆ ತೆರಳಿದ್ದರು. ಇದರಿಂದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.
ಅಂತರವಿಲ್ಲ, ಕೋವಿಡ್ ಭಯವಿಲ್ಲ
ಅಗತ್ಯ ವಸ್ತುಗಳ ಖರೀದಿಗೆ ಜನರು ಭಾರಿ ಸಂಖ್ಯೆಯಲ್ಲಿ ಪೇಟೆಗೆ ಬಂದಿದ್ದರಿಂದ ಸಾಮಾಜಿಕ ಅಂತರ ಕಾಪಾಡಲು ಸಾದ್ಯವಾಗಲಿಲ್ಲ. ಕರೋನ ಭಯವಿಲ್ಲದೆ ಜನರು ಪಟ್ಟಣದಲ್ಲಿ ಸುತ್ತಾಡಿ, ಅಗತ್ಯ ವಸ್ತುಗಳನ್ನು ಖರೀದಿಸಿದರು.
ಜಿಲ್ಲಾಡಳಿತದ ನಡೆ ಹಲವರ ಆಕ್ರೋಶಕ್ಕೆ ಕಾರಣವಾಯಿತು. ನಿತ್ಯ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಿ, ಕಠಿಣ ಲಾಕ್ ಡೌನ್ ಮಾಡಬಹುದಿತ್ತು. ಆದರೆ ಜಿಲ್ಲಾಡಳಿತ ಗೊಂದಲಕಾರಿಯಾಗಿ ನಿರ್ಧಾರಗಳನ್ನು ಪ್ರಕಟಿಸುತ್ತಿದೆ ಎಂದ ಆರೋಪಿಸಿದರು.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






