ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MAY 2021
ಕರೋನ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಶಿವಮೊಗ್ಗ ತಾಲೂಕು ಹಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಜೂನ್ 2ರ ಬೆಳಗ್ಗೆ 6 ಗಂಟೆಯಿಂದ ಜೂನ್ 6ರ ರಾತ್ರಿ 12 ಗಂಟೆವರೆಗೆ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಹಶೀಲ್ದಾರ್ ಆದೇಶಿಸಿದ್ದಾರೆ.
ಹಾರನಹಳ್ಳಿ ಗ್ರಾಮ ಪಂಚಾಯಿತಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಾಗಿದೆ. ಅದರ ಆಧಾರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಅವಧಿಯಲ್ಲಿ ಮೂರು ಜನಕ್ಕಿಂತಲೂ ಹೆಚ್ಚು ಜನ ಗುಂಪುಗೂಡುವಂತಿಲ್ಲ. ಮೆರವಣಿಗೆ, ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ. ಈಗಾಗಲೆ ನಿಗದಿಯಾಗಿರುವ ಮದುವೆ, ಖಾಸಗಿ ಕಾರ್ಯಕ್ರಮಗಳಿಗೆ ಪ್ರಾಧಿಕಾರದ ಅನುಮತಿ ಕಡ್ಡಾಯ. ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲು ಕೇಂದ್ರಗಳು ಮಾತ್ರ ತೆಗೆಯಲು ಅನುಮತಿ ನೀಡಲಾಗಿದೆ ಎಂದು ತಹಶೀಲ್ದಾರ್ ಎನ್.ಜೆ.ನಾಗರಾಜ್ ಆದೇಶಿಸಿದ್ದಾರೆ.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





