ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021
ಆಶ್ರಯ ಯೋಜನೆ ಅಡಿ ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಜಿ+2 ಮಾದರಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇದರ ವಂತಿಗೆ ಪಾವತಿಸದ ಫಲಾನುಭವಿಗಳು ಕೂಡಲೆ ಹಣ ಪಾವತಿಸಬೇಕಿದೆ. ಇಲ್ಲವಾದಲ್ಲಿ ಆನ್ ಲೈನ್ ಮೂಲಕ ಅರ್ಜಿ ಕರೆದು ನೂತನ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಜಿ+2 ಮಾದರಿಯಲ್ಲಿ ಗೋವಿಂದಾಪುರದಲ್ಲಿ 3 ಸಾವಿರ ಮನೆಗಳು ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ 1836 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇದಕ್ಕೆ ಒಟ್ಟು 5838 ಫಲಾನುಭವಿಗಳ ಆಯ್ಕೆ ಮಾಡಲಾಗಿದೆ ಎಂದರು.
ಗೋವಿಂದಾಪುರದ ಮನೆಗಳಿಗೆ ಆಯ್ಕೆಯಾದ ಫಲಾನುಭವಿಗಳ ಪೈಕಿ 2991 ಮಂದಿ ವಂತಿಗೆ ಹಣ ಪಾವತಿಸಿದ್ದಾರೆ. ಈ ಫಲಾನುಭವಿಗಳಿಗೆ ಜಿ+2 ಮಾದರಿ ಮನೆಗಳನ್ನು ಅಂತಿಮಗೊಳಿಸಲಾಗಿದೆ. ಗೋಪಿಶೆಟ್ಟಿಕೊಪ್ಪದ ಫಲಾನುಭವಿಗಳಲ್ಲು ಹಲವರು ವಂತಿಗೆ ಹಣ ಪಾವತಿಸಿಲ್ಲ ಎಂದು ತಿಳಿಸಿದರು.
ವಂತಿಗೆ ಹಣ ಪಾವತಿಸಲು ಜುಲೈ ಅಂತ್ಯದವರೆಗೆ ಅವಕಾಶ ಕಲ್ಪಿಸಲಾಗಿದೆ. ಇಲ್ಲವಾದಲ್ಲಿ ಆನ್ ಲೈನ್ ಮೂಲಕ ಹೊಸದಾಗಿ ಅರ್ಜಿ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಈಶ್ವರಪ್ಪ ತಿಳಿಸಿದರು.
ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]