ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 JUNE 2021
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಕರೋನ ನಿಯಂತ್ರಣ ಮತ್ತು ಅದರ ನಿರ್ವಹಣೆ ಕುರಿತು ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಸಿಎಂ ಪ್ರವಾಸದ ಪ್ಲಾನ್
ಜೂನ್ 11ರಂದು ಬೆಂಗಳೂರಿನಿಂದ ಹಾಸನಕ್ಕೆ ಸಿಎಂ ಯಡಿಯೂರಪ್ಪ ತೆರಳಲಿದ್ದಾರೆ. ಅಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಧ್ಯಾಹ್ನ 12.45ರ ಹೊತ್ತಿಗೆ ಹೆಲಿಕಾಪ್ಟರ್ ಮೂಲಕ ಶಿಕಾರಿಪುರಕ್ಕೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ರಾತ್ರಿ ಶಿಕಾರಿಪುರದಲ್ಲೇ ಸಿಎಂ ವಾಸ್ತವ್ಯ ಮಾಡಲಿದ್ದಾರೆ.
ಜೂನ್ 12ರಂದು ಶಿಕಾರಿಪುರದಲ್ಲಿ ಸಿಎಂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಕರೋನ ನಿರ್ವಹಣೆ ಮತ್ತು ಅಭಿವೃದ್ಧಿ ವಿಚಾರಗಳ ಕುರಿತು ಸಿಎಂ ಚರ್ಚೆ ನಡೆಸಲಿದ್ದಾರೆ. ರಾತ್ರಿ ಶಿಕಾರಿಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಜೂನ್ 13ರಂದು ಬೆಳಗ್ಗೆ 11 ಗಂಟೆಗೆ ಶಿಕಾರಿಪುರದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422