ಇಲಿಯಿಂದಾಗಿ ತೀರ್ಥಹಳ್ಳಿಯಲ್ಲಿ ಮಹಿಳೆಗೆ ಹೃದಯಾಘಾತ, ಸಾವು

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 10 JUNE 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಇಲಿಯಿಂದಾಗಿ ಮಹಿಳೆಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿಯ ಕುರುವಳ್ಳಿ ಬೊಮ್ಮಸಯ್ಯನ ಅಗ್ರಹಾರದ ಆಶ್ರಯ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ.

ಶಕುಂತಲಾ (52) ಮೃತ ದುರ್ದೈವಿ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಮಹಡಿಯಿಂದ ಇಲಿಯೊಂದು ಶಕುಂತಲಾ ಅವರ ಮೇಲೆ ಬಿದ್ದಿದೆ. ಇದರಿಂದ ಗಾಬಾರಿಯಾದ ಶಕುಂತಲಾ ಅವರಿಗೆ ಹೃದಯಾಘಾತವಾಗಿದೆ.

ಕೂಡಲೆ ಶಕುಂತಲಾ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಶಕುಂತಲಾ ಅವರು ಕೊನೆಯುಸಿರೆಳೆದಿದ್ದಾರೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌