ತೀರ್ಥಹಳ್ಳಿಯಲ್ಲಿ ವೃದ್ಧೆಯ ಕತ್ತು ಹಿಸುಕಿ ಹಣ ದೋಚಲು ಯತ್ನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 10 JUNE 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವೃದ್ಧೆಯೊಬ್ಬರ ಕತ್ತು ಹಿಸುಕಿ ಅವರ ಬಳಿಯಿದ್ದ ಹಣವನ್ನು ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ ಯುವಕನೊಬ್ಬನನ್ನು ಸಾರ್ವಜನಿಕರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ತೀರ್ಥಹಳ್ಳಿಯ ಕಟ್ಟೆಹಕ್ಕಲು ಬಳಿ ಘಟನೆ ನಡೆದಿದೆ. ಕತ್ತು ಹಿಸುಕಿದ್ದರಿಂದ ಭವಾನಿಯಮ್ಮ (85) ಎಂಬುವವರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಭವಾನಿಯಮ್ಮ ಅವರು ಅಂಚೆ ಕಚೇರಿಯಿಂದ ವೃದ್ಧಾಪ್ಯ ವೇತನದ ಹಣ ಬಿಡಿಸಿಕೊಂಡು ಮನೆಗೆ ಮರಳುತ್ತಿದ್ದರು. ಬೈಕ್‍ನಲ್ಲಿ ಬಂದ ಇಬ್ಬರು ಯುವಕರು ವೃದ್ಧೆಯ ಕತ್ತು ಹಿಸುಕಿ ಹಣ ದೋಚಲು ಯತ್ನಿಸಿದ್ದಾರೆ.

ಕೃತ್ಯವನ್ನು ಗಮನಿಸಿದ ಸ್ಥಳೀಯರು ವೃದ್ಧೆಯ ನೆರವಿಗೆ ಬಂದಿದ್ದಾರೆ. ಈ ವೇಳೆ ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಧಾವಂತದಲ್ಲಿ ಶಿವಮೊಗ್ಗದ ಗೋಪಾಳ ನಿವಾಸಿ ನಿತಿನ್ (36) ಎಂಬಾತ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

189146674 1131587070654535 9127287656608744677 n.jpg? nc cat=107&ccb=1 3& nc sid=8bfeb9& nc ohc=Jmr3WxJAjjEAX i1r8l& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment