ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ನೀಲನಕ್ಷೆ ರೆಡಿ, ಎರಡನೇ ಪ್ಯಾಕೇಜ್ ಕರಾರಿಗೆ ಸಹಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JUNE 2021

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವತ್ತು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ನಡೆಸಿದರು. ಮುಂದಿನ ವರ್ಷ ಜೂನ್‍ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಶಿವಮೊಗ್ಗ ತಾಲೂಕು ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಇವತ್ತು ರನ್‍ ವೇ ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ, ಅಧಿಕಾರಿಗಳು, ಗುತ್ತಿಗೆದಾರರಿಂದ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು.

ವಿನ್ಯಾಸ ಅನವಾರಣ ಮಾಡಿದ ಸಿಎಂ

ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಕಾಮಗಾರಿ ಆರಂಭವಾಗಲಿದೆ. ಇವತ್ತು ಸಿಎಂ ಅದರ ನೀಲನಕ್ಷೆಯನ್ನು ಅನಾವರಣಗೊಳಿಸಿದರು. ಡಿಜಿಟಲ್ ನೀಲನಕ್ಷೆ ಉದ್ಘಾಟಿಸಿ ವೀಕ್ಷಿಸಿದರು.

384 ಕೋಟಿಯ ವಿಮಾನ ನಿಲ್ದಾಣ

ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ,  384 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾರ್ಯ ನಡೆಯುತ್ತಿದೆ. 216.06 ಕೊಟಿ ರೂ. ವೆಚ್ಚದಲ್ಲಿ ರನ್‍ ವೇ ಮತ್ತು ಇತರೆ ಕಾಮಗರಿಗಳು ನಡೆಯುತ್ತಿವೆ. 110 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್, ಏರ್‍ ಟ್ರಾಫಿಕ್ ಕಂಟ್ರೋಲ್‍ ಕಟ್ಟಡ ನಿರ್ಮಿಸಲಾಗುತ್ತಿದೆ. ಈಗಾಗಲೇ 900 ಮೀಟರ್ ರನ್‍ ವೇ ಕಾಮಗಾರಿಯ ಮಣ್ಣು ಅಗೆತ ಮತ್ತು ಎಂಬ್ಯಾಕ್ಟ್‍ಮೆಂಟ್‍ ಕಾಮಗಾರಿ ಮುಗಿದಿದೆ. 900 ಮೀಟರ್‍ನಿಂದ 2940 ಮೀಟರ್‍ವರೆಗಿನ ಮಣ್ಣು ಅಗೆತ ಮತ್ತು ಎಂಬ್ಯಾಕ್ಟ್‍ಮೆಂಟ್‍ ನಡೆಯುತ್ತಿದೆ ಎಂದು ತಿಳಿಸಿದರು.

ಎರಡು ದಿನದ ಹಿಂದೆ ಕರಾರು

ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡರೆ ಕೈಗಾರಿಕೋದ್ಯಮಿಗಳು ಶಿವಮೊಗ್ಗಕ್ಕೆ ಬರಲು ಅನುಕೂಲವಾಗಲಿದೆ. ಹತ್ತಾರು ಸಾವಿರ ಯುವಕರಿಗೆ ಉದ್ಯೋಗ ಸಿಗಲಿದೆ. ಬೆಂಗಳೂರು ನಂತರ ಅತ್ಯಂತ ಉತ್ತಮ ವಿಮಾನ ನಿಲ್ದಾಣ ಇದಾಗಲಿದೆ. ಪ್ರಯಾಣಿಕರ ಟರ್ಮಿನಲ್, ಎಟಿಸಿ, ಮತ್ತಿತರ ಮೂಲಸ ಸೌಕರ್ಯದ ಪ್ಯಾಕೇಜ್ 2 ಕಾಮಗಾರಿ ಕರಾರು ಪತ್ರಕ್ಕೆ ಎರಡು ದಿನದ ಹಿಂದೆ ಸಹಿ ಹಾಕಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

191923408 1406031566424926 6589783979701860365 n.jpg? nc cat=102&ccb=1 3& nc sid=8bfeb9& nc ohc=T4qfn9kfGl8AX8uBlJc& nc ht=scontent.fblr20 1

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಂಸದ ಬಿ.ವೈ.ರಾಘವೇಂದ್ರ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಸಿಇಒ ವೈಶಾಲಿ ಸೇರಿದಂತೆ ಹಲವರು ಇದ್ದರು.

ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 12, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment